ಕಲಬುರಗಿ: ಹಲವು ಮಹನೀಯರ ಬಲಿದಾನದಿಂದ ದೇಶ ಸ್ವಾತಂತ್ರ್ಯ ಪಡೆಯಲು ಸಾಧ್ಯವಾಗಿದೆ. ಸ್ವಾತಂತ್ರ್ಯ ಹೋರಾಟದ ಘಟನೆಗಳನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಂತರ ವಿಜ್ಞಾನ ಕ್ಷೇತ್ರದ ಅವಿಷ್ಕಾರದಿಂದ ಐಟಿ, ಬಿಟಿ ಮತ್ತು ಎಐ ತಂತ್ರಜ್ಞಾನದಿಂದ ದೇಶದ ಪ್ರಗತಿ ಮತ್ತಷ್ಟು ವೇಗವಾಗಿ ಬೆಳೆಯುತ್ತಿದೆ. ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ತಾಂತ್ರಿಕತೆಯ ಬದಲಾವಣೆಗಳನ್ನು ವಿದ್ಯಾರ್ಥಿ ಸಮೂಹ ಗ್ರಹಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದ ಮುಂಭಾಗದಲ್ಲಿ ಇಂದು ಆಯೋಜಿಸಿದ 78ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯಕ್ಕಾಗಿ ಮಹಾತ್ಮಗಾಂಧಿ, ಸರ್ದಾರ ವಲ್ಲಬಾಯಿ ಪಟೇಲ್, ಸುಭಾಷ್ ಚಂದ್ರ ಬೋಷ್ ಹಾಗೂ ಲಕ್ಷ್ಮಿ ಸೆಗಲ್ ಸೇರಿದಂತೆ ಮುಂತಾದ ನಾಯಕರ ಹೋರಾಟದ ಹೆಜ್ಜೆಗುರುತುಗಳನ್ನು ಯಾರು ಮರೆಯುವಂತಿಲ್ಲ. ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿದ ಶ್ರೇಷ್ಠ ಸಂವಿಧಾನದ ಆಶಯದಂತೆ ದೇಶ ಪ್ರಬಲ ಶಕ್ತಿಯಾಗಿ ಬೆಳೆದಿದೆ. ಸಾಮಾಜಿಕ ಉನ್ನತಿ ಸಾಧನೆಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮರಸ್ಯ ಜೀವನ ಪ್ರತಿಯೊಬ್ಬರ ಕನಸಾಗಬೇಕು. ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಬೆಳೆಸುವ ಮೂಲಕ ಸಮುದಾಯದಲ್ಲಿ ಪ್ರೀತಿ ಮತ್ತು ಬಾಂಧವ್ಯ ಬೆಳೆಸಿಕೊಂಡು ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ಕುವೆಂಪು ಅವರ ವಿಶ್ವಮಾನವ ಸಂದೇಶ, ಬಸವಣ್ಣನವರ ಚಿಂತನೆಗಳ ಪ್ರೇರಣೆಯಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗಲಿದೆ. ಮಾನವ ಧರ್ಮ ಪಾಲನೆ ಇಂದು ಅವಶ್ಯಕತೆಯಿದೆ ಎಂದರು.
ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ರಾಜನಾಳ್ಕರ್ ಲಕ್ಷ್ಮಣ, ಮೌಲ್ಯಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ, ವಿತ್ತಾಧಿಕಾರಿ ಕು. ಗಾಯತ್ರಿ, ಆಡಳಿತ ವಿಶೇಷಾಧಿಕಾರಿ ಪ್ರೊ. ಚಂದ್ರಕಾಂತ್ ಕೆಳಮನಿ, ಕಲಾ ನಿಕಾಯದ ಡೀನ್ ಪ್ರೊ. ರಬ್ ಉಸ್ತಾದ್, ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ಶ್ರೀರಾಮುಲು, ಶಿಕ್ಷಣ ನಿಕಾಯದ ಡೀನ್ ಪ್ರೊ. ಹೂವಿನಬಾವಿ ಬಾಬಣ್ಣ, ಕಾನೂನು ನಿಕಾಯದ ಡೀನ್ ಪ್ರೊ. ದೇವಿದಾಸ ಮಾಲೆ, ಗ್ರಂಥಪಾಲಕ ಡಾ. ಸುರೇಶ್ ಜಂಗೆ, ಪ್ರೊ. ಹೆಚ್. ಟಿ. ಪೋತೆ, ಪ್ರೊ. ಜಿ.ಎಂ. ವಿದ್ಯಾಸಾಗರ, ಪ್ರೊ. ಕೆರೂರು, ಪ್ರೊ. ರಮೇಶ್ ರಾಥೋಡ್, ಡಾ. ಎನ್. ಜಿ. ಕಣ್ಣೂರು ಹಾಗೂ ನಿವೃತ್ತ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ, ಅತಿಥಿ ಸಹಾಯಕ ಪ್ರಾಧ್ಯಾಪಕರು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ಪ್ರಾಥಾಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
78ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ‘ಹರ್ ಘರ್ ತಿರಂಗಾ’‘ ಆಚರಣೆ ನಿಮಿತ್ತ ವಿಶ್ವವಿದ್ಯಾಲಯದ ಕಾರ್ಯಸೌಧದಿಂದ ಗ್ರಂಥಾಲಯದವರೆಗೆ ಕುಲಪತಿ ಪ್ರೊ. ದಯಾನಂದ ಅಗಸರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ದೇಶಭಿಮಾನದ ಸಂದೇಶ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದರು.
ಸಂಗೀತ ವಿಭಾಗದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಪ್ರಸ್ತುತಪಡಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಯ ವಿದ್ಯಾರ್ಥಿಗಳು ದೇಶ ಭಕ್ತಿಗೀತೆ ಪ್ರಸ್ತುತಿಗೆ ನೃತ್ಯ ಪ್ರದರ್ಶಿಸಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ರಮೇಶ್ ಲಂಡನ್‌ಕರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…