ಕಲಬುರಗಿ; ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ ಸಂಸ್ಥೆಯ ವತಿಯಿಂದ, ಕೈಮಗ್ಗ ನಸಿಸಿ ಹೋಗುತ್ತಿರುವ ಈ ಸಂದರ್ಭದಲ್ಲಿ ನೇಕಾರರ ತ್ಯಾಗ ಬಲಿದಾನ ಮತ್ತು ಪುನರುತ್ಥಾನ ಗೊಳಿಸುವ ಕಾರ್ಯಕ್ಕೆ ಪ್ರೋತ್ಸಾಹಿಸುವ ಕಾರ್ಯಕ್ರಮದಲ್ಲಿ ಹಲವರಿಗೆ ತ್ರಿವಣ೯ ಧ್ವಜದ ಹಾಕಿ ಗೌರವಿಸಲಾಯಿತು.
ಸಪ್ತ ನೇಕಾರ ಸಮುದಾಯಗಳ ಎಲ್ಲಾ ಅಧ್ಯಕ್ಷರನ್ನು, ವಿವಿಧ ಮಠಾಧೀಶರನ್ನು, ಸಾಹಿತಿಗಳನ್ನು, ಹಿರಿಯ ವಕೀಲರಿಗೆ, ಕಿರಿಯ ನ್ಯಾಯವಾದಿಗಳಿಗೆ, ಹಿರಿಯ ಪತ್ರಕರ್ತ-ಸಂಪಾದಕರಿಗೆ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹಿಳೆಯರಿಗೆ ಹೀಗೆ ಒಟ್ಟು 78 ಜನರಿಗೆ ಸಂಕೇತದ ರೂಪದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಪ್ತ ನೇಕಾರರ 21 ಯುವಕ ಸಂಘದ ಪಧಾದಿಕಾರಿಗಳಿಗೆ ಸನ್ಮಾನಿ ಕನ್ನಡ ಸಾಹಿತ್ಯ ಪರಿಷತ್ತಿನ 9 ಜನರನ್ನು ಗೌರವಿಸಲಾಯಿತು. ದೇಶಾಭಿಮಾನ ಸದಾ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಲಿ ಎನ್ನುವ ಸಂಕಲ್ಪದೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸನ್ಮಾನಿಸಿ 78 ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಸಂಸ್ಥೆಯ ಸಂಸ್ಥಾಪಕ ಶಿವಲಿಂಗಪ್ಪಾ ಅಷ್ಟಗಿಯವರ ನೇತೃತ್ವದಲ್ಲಿ ಮತ್ತು ಸಪ್ತ ನೇಕಾರರ ಸೇವಾ ಸಂಘದ ಕಾರ್ಯದರ್ಶಿ ಹಾಗೂ ಕುರಹಿನ ಶೆಟ್ಟಿ ನೇಕಾರ ಸಮಾಜದ ಪ್ರಧಾನ ಕಾರ್ಯದರ್ಶಿ ಮ್ಯಾಳಗಿ ಚಂದ್ರಶೇಖರ್ ರವರ ಉಸ್ತುವಾರಿಯಲ್ಲಿ, ತೊಗಟವೀರ ಸಮಾಜದ ಶ್ರೀನಿವಾಸ ಬಲಪೂರ್, ಸ್ವಕುಳ ಸಾಲಿ ಸಮಾಜದ ಭಂಡಾರಿ ರಾಜಗೋಪಾಲ, ಮಲ್ಲಿನಾಥ್ ಬಡ್ಡುರ್, ಹಿರಿಯರಾದ ಗುರುಲಿಂಗಪ್ಪ ಹತ್ತರಕಿ, ನ್ಯಾಯವಾದಿ ಜೇನವೆರಿ ವಿನೋದ ಕುಮಾರ ರವರ ಸಂಚಾಲನೆಯೊಂದಿಗೆ ಅದ್ದೂರಿಯಾಗಿ ಸ್ವಾತಂತ್ರೋತ್ಸವ ಆಚರಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…