ಬಿಸಿ ಬಿಸಿ ಸುದ್ದಿ

ಶಿಕ್ಷಣ ಜೋತೆ ಸ್ವಯಂ ಉದ್ಯೋಗದ ಕೌಶಲ್ಯ ಬೆಳೆಸಿಕೊಳ್ಳಿ

ಕಲಬುರಗಿ: ಇಂದು ಪ್ರತಿಯೋಬ್ಬರಿಗೂ ಒಳ್ಳೆಯ ಶಿಕ್ಷಣ ಸಿಗುತ್ತಿದೆ.ಆದರೆ ಉದ್ಯೋಗ ಸಿಗುವದು ಗಗನಕುಸುಮವಾಗಿದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಜ್ಞಾನಕ್ಕೆ ಬಳಸಿಕೊಂಡು ಅದರ ಜೋತೆ ಅತ್ಯುತ್ತಮ ಕೌಶಲ್ಯ ಬೆಳೆಸಿಕೊಂಡು ಸ್ವಯಂ ಉದ್ಯೋಗದತ್ತ ಗಮನ ಹರಿಸಬೇಕೆಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಯವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯು ವಿಧ್ಯಾರ್ಥಿಗಳಿಗೆ ಸಂಸ್ಕಾರ ನೀಡುವ ಜೋತೆ ಜೀವನಕ್ಕೆ ಬೇಕಾದ ಒಳ್ಳೆಯ ಕೌಶಲ್ಯಗಳನ್ನು ಕಲಿಸುತ್ತದೆ. ಇಂತಹ ಕೌಶಲ್ಯಗಳನ್ನು ವಿಧ್ಯಾರ್ಥಿಗಳು ಜೀವನದಲ್ಲಿ ಸದಾ ಅಳವಡಿಸಿಕೊಂಡು ದೇಶದ ಅತ್ಯುತ್ತಮ ನಾಗರಿಕ ರಾಗಬೇಕು ಎಂದು ಹೇಳಿದರು.

ಇಂದು ನಾವು ಉದ್ಯೋಗಕ್ಕಾಗಿ ಸರ್ಕಾರದ ಮೇಲೆ ಅವಲಂಬಿರಾಗಿರದೆ ನಾವೆ ಸ್ವಂತ ಉದ್ಯೋಗ ಮಾಡಿ ಸರ್ಕಾರ ಹಾಗೂ ಹೆತ್ತ ತಂದೆ ತಾಯಿ ಹಾಗೂ ಭಾರತಮಾತೆಯ ಋಣ ತೀರಿಸಲು ಪಣತೋಡಲು ಕರೆ ನೀಡಿದರು.ಅತಿಥಿಗಳಾಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ತಂಡಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ ರಾಜೇಂದ್ರ ಕೊಂಡಾ ವಹಿಸಿ ಮಾತನಾಡಿದರು. ಏಳು ದಿನಗಳ ಕಾಲ ನಡೆದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ವರದಿ ವಾಚನವನ್ನು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೋಡಲ್ ಅಧಿಕಾರಿ ಡಾ ಮಹೇಶ್ ಕುಮಾರ್ ಗಂವ್ಹಾರ ನೆರವೇರಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ ವೀಣಾ, ಶ್ರೀಮತಿ ಉಮಾ ರೇವೂರ, ಕಾರ್ಯಕ್ರಮ ಅಧಿಕಾರಿಗಳಾದ ಡಾ ರೇಣುಕಾ ಎಚ್, ಶ್ರೀಮತಿ ಸುಷ್ಮಾ ಕುಲಕರ್ಣಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ ಮೋಹನರಾಜ ಪತ್ತಾರ,ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಪ್ರೇಮಚಂದ್ ಚವಾಣ್, ಡಾ ರಾಜೇಶ್ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ರಜನಿ ಮಲಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago