ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದೇ ಮೊದಲ ಬಾರಿಗೆ ಇಂದು ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಆಯೋಜಿಸಿದ ಜಿಲ್ಲಾ ದಲಿತ ಚಳವಳಿ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ.
ಶನಿವಾರದಂದು ಬೆಳಗ್ಗೆ 9.45 ಕ್ಕೆ ಜಗತ್ ವೃತ್ತದಿಂದ ವಿಶ್ವೇಶ್ವರಯ್ಯಾ ಭವನದವರೆಗೆ ಸಮ್ಮೇಳನಾಧ್ಯಕ್ಷರಾದ ಡಾ. ಡಿ.ಜಿ. ಸಾಗರ ಅವರ ಸಾಂಸ್ಕøತಿಕ ಮೆರವಣಿಗೆ ವಿವಿಧ ಕಲಾ ಮೇಳಗಳೊಂದಿಗೆ ವರ್ಣರಂಜಿತವಾಗಿ ಜರುಗಲಿದೆ. ಮಹಾಪೌರ ಯಲ್ಲಪ್ಪ ನಾಯ್ಕೋಡಿ ಚಾಲನೆ ನೀಡಲಿದ್ದಾರೆ. ಕಲ್ಯಾಣಕುಮಾರ ಶೀಲವಂತ ನೇತೃತ್ವ ವಹಿಸಲಿದ್ದಾರೆ.
ಮಧ್ಯಾಹ್ನ 1.15 ಕ್ಕೆ ಪರೋಪಕಾರಿ ಡಾ. ಶಿವರಾಮ ಮೋಘಾ ವೇದಿಕೆಯಡಿಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಣಿ ಎಸ್ ಅಪ್ಪಾ ಅವರು ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ ಖರ್ಗೇ ಅವರು ಉದ್ಘಾಟಿಸಲಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕøತ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಸಂಸದ ರಾಧಾಕೃಷ್ಣ ದೊಡ್ಡಮನಿ, ಸಚಿವ ಡಾ. ಶರಣಪ್ರಕಾಶ ಪಾಟೀಲ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಡಾ. ಬಿ.ಜಿ.ಪಾಟೀಲ, ಶಶೀಲ್ ಜಿ ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಎಂ.ವೈ. ಪಾಟೀಲ, ಡಾ. ಅವಿನಾಶ ಜಾಧವ, ಜಗದೇವ ಗುತ್ತೇದಾರ, ಮಾಣಿಕ ಎಸ್ ಕನಕಟ್ಟಿ, ದೇವೀಂದ್ರಪ್ಪ ಮರತೂರ, ಡಾ. ಕೆ ಗುರುಲಿಂಗಪ್ಪ ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಆಶಯ ನುಡಿಗಳನ್ನಾಡುವರು.
ಮಧ್ಯಾಹ್ನ 3.30 ಕ್ಕೆ ಮೊದಲ ಗೋಷ್ಠಿಯಲ್ಲಿ ವರ್ತಮಾನದೊಂದಿಗೆ ಮುಖಾಮುಖಿ ಶೀರ್ಷಿಕೆಯಡಿಯಲ್ಲಿ ದಲಿತ ಸಾಹಿತ್ಯ ಮತ್ತು ಮಹಿಳಾ ಸಂವೇದನೆ ಕುರಿತು ಡಾ. ಅಮೃತಾ ಕಟಕೆ, ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ ಕುರಿತು ಪ್ರೊ. ಸಂಜಯ ಮಾಕಲ್ ಮಾತನಾಡಲಿದ್ದು, ಡಾ. ಶ್ರೀಶೈಲ್ ನಾಗರಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಶಿವರಂಜನ್ ಸತ್ಯಂಪೇಟೆ ಆಶಯ ನುಡಿಗಳನ್ನಾಡುವರು.
ಗಾಯಕರಾದ ಪ್ರೊ. ಅಂಬಣ್ಣ ಜೀವಣಗಿ, ಸಿದ್ದಾರ್ಥ ಚಿಮ್ಮಾಇದಲಾಯಿ, ಶ್ರೀಧರ ಹೊಸಮನಿ, ಜೈಭೀಮ ಸಾವಳಗಿ, ಬಸವರಾಜ ಆಲಗೂಡ, ವಾಡಿಯ ಜನಕಲಾ ಸಮಿತಿ ತಂಡದವರಿಂದ ಜಾಗೃತಿಯ ಗೀತೆಗಳು ಹಾಡಲಿದ್ದಾರೆ.
ಸಮ್ಮೇಳನಾಧ್ಯಕ್ಷ ಡಾ. ಡಿ.ಜಿ. ಸಾಗರ ಅವರ ಬದುಕು ಮತ್ತು ಚಳವಳಿಗೆ ಸಂಬಂಧಿಸಿದ ಭಾವಚಿತ್ರಗಳ ಪ್ರದರ್ಶನವೂ ಸಹ ಏರ್ಪಡಿಸಲಾಗಿದೆ. ಪ್ರಮುಖರಾದ ಎಸ್.ಪಿ. ಸುಳ್ಳದ್, ಎಚ್. ಶಂಕರ, ಬಿ.ಸಿ. ವಾಲಿ, ಸುರೇಶ ಹಾದಿಮನಿ, ಡಾ. ವಿಷ್ಣುವರ್ಧನ್ ಅವರು ನೇತೃತ್ವ ವಹಿಸಲಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…