ಸುರಪುರ: ನಗರದ ತಹಸಿಲ್ದಾರ್ ಕಚೇರಿಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಟಾಸ್ಕ್ ಫೋರ್ಸ್ ಸಭೆ ನಡೆಸಲಾಯಿತು.ನಂತರ ನಗರದಲ್ಲಿ ಪ್ರತಿ ಅಂಗಡಿಗಳು ಭೇಟಿ ನೀಡಿ ಜಾಗೃತಿ ಮೂಡಿಸಲಾಯಿತು.
ಈಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ತಾಲೂಕ ಆಡಳಿತ,ಆರೋಗ್ಯ ಇಲಾಖೆ,ಕಾರ್ಮಿಕ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ,ಸಮಾಜ ಕಲ್ಯಾಣ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಕಚೇರಿ,ಮಕ್ಕಳ ಸಹಾಯವಾಣಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಜಾಥಾ ನಡೆಸಿ ಪ್ರತಿ ಅಂಗಡಿಗಳಲ್ಲಿ ಬಾಲ ಕಾರ್ಮಿಕರು ಇರುವ ಕುರಿತು ತಪಾಸಣೆ ನಡೆಸಲಾಯಿತು.ಅಲ್ಲದೆ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ಯಾವುದೇ ಕಾರಣಕ್ಕೂ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ,ನೇಮಿಸಿ ಕೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎನ್ನುವ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಕೆ.ವಿಜಯಕುಮಾರ,ತಾಲೂಕ ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದಶರಥ ನಾಯಕ,ಕಾರ್ಮಿಕ ನಿರೀಕ್ಷಕ ಶಿವರಾಜ ಜಮಾದಾರ,ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ,ಪೊಲೀಸ್ ಇಲಾಖೆ ಎಎಸ್‍ಐ ಮಲ್ಲಿಕಾರ್ಜುನ ಭರಣಿ,ಸಮಾಜ ಕಲ್ಯಾಣ ಇಲಾಖೆಯ ರಮೇಶ,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಅಧಿಕಾರಿಗಳು,ಮಾರ್ಗದರ್ಶಿ ಸಂಸ್ಥೆಯ ಪ್ರತಿನಿಧಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.