ಸುರಪುರ: ನಗರದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ತಮ್ಮ ಕಚೇರಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೂತನ ತಾಲೂಕ ಘಟಕ ಉದ್ಘಾಟನಾ ಕಾರ್ಯಕ್ರಮದ ಭಿತ್ತಿ ಪತ್ರಗಳ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ,ಸಂಘ ಸಂಸ್ಥೆಗಳು ಸಮಾಜದ ಏಳಿಗೆಗೆ ಪ್ರಮುಖ ಪಾತ್ರ ವಹಿಸುತ್ತವೆ.ಸಮಾಜದ ಜನರಲ್ಲಿ ಸರಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಸರಕಾರಗಳ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಸಂಘ ಸಂಸ್ಥೆಗಳು ಜನರಿಗೆ ಸದುಪಯೋಗವಾಗಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ವೆಂಕಟೇಶ ಹೊಸ್ಮನಿ ಮಾತನಾಡಿ,ಇದೇ ಆಗಷ್ಟ್ 26ನೇ ತಾರಿಕು ನಗರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸಂಘದ ತಾಲೂಕ ಘಟಕ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಯಾದವ್,ಸಂಘದ ಜಿಲ್ಲಾ ಸಂಚಾಲಕ ಹಣಮಂತ ಹೊಸ್ಮನಿ,ಶ್ರೀನಿವಾಸ ನಾಯಕ ಬೊಮ್ಮನಹಳ್ಳಿ,ರಾಜು ದೊಡ್ಡಮನಿ ಶಖಾಪುರ,ತಾಲೂಕ ಸಂಚಾಲಕ ಮಲ್ಲು ಮುಷ್ಠಳ್ಳಿ,ಮಾನಪ್ಪ ಬಳಬಟ್ಟಿ ಬೋನ್ಹಾಳ,ಮಲ್ಲು ಕೆಸಿಪಿ,ವೈಜನಾಥ ಹೊಸ್ಮನಿ,ಗಿರೀಶ ಶಾಖಾನವರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.