ಬಿಸಿ ಬಿಸಿ ಸುದ್ದಿ

ಅವ್ಯವಹಾರ ನಡೆಸಿ ಕೀಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೇ ಕ್ರಮ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಕೊಪ್ಪಳ: ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ನೇಮಕಾತಿ ಹಾಗೂ ಸಾಮಗ್ರಿ ಖರೀದಿ ಸೇರಿದಂತೆ ಯಾವುದೇ ವಿಷಯದಲ್ಲಿ ಅವ್ಯವಹಾರಕ್ಕೆ ಅವಕಾಶವಿಲ್ಲದ ಹಾಗೆ ಆಡಳಿತ ನಡೆಸುವ ಮೂಲಕ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಮಾದರಿಯಾಗಬೇಕು ಎಂದು ವೈದ್ಯಕೀಯ ಶಿಕ್ಷಣ‌ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರು ಹೇಳಿದರು.

ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಆಗಸ್ಟ್ 16ರಂದು ಸಂಸ್ಥೆಯ‌ ನಿರ್ದೇಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ವಿವಿಧ ಪ್ರಾಧ್ಯಾಪಕರೊಂದಿಗೆ
ಸಭೆ ನಡೆಸಿ ಅವರು ಮಾತನಾಡಿದರು.

ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಚಾಲ್ತಿಯಲ್ಲಿರುವ ಕಾಮಗಾರಿಗಳು ಗುಣಮಟ್ಟದ ರೀತಿಯಲ್ಲಿ ನಡೆಯಬೇಕು. ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕಳಪೆ ಕಾಮಗಾರಿಯಾಗಿದ್ದರೆ ಗುತ್ತಿಗೆದಾರರಿಗೆ ನೊಟೀಸ್ ಜಾರಿ ಮಾಡಿ. ಸಂಸ್ಥೆಯ ಸುಪರ್ದಿಗೆ ಪಡೆಯುವ ಮೊದಲು ಕಟ್ಟಡದ ಕಾಮಗಾರಿಯ ಗುಣಮಟ್ಟದ ಬಗ್ಗೆ ಪರಿಶೀಲಿಸಿ ಎಂದು ಸಚಿವರು ತಿಳಿಸಿದರು.

ಕೊಪ್ಪಳ ಜಿಲ್ಲೆಯು ಬಯಲುಸೀಮೆಯ ನೆಲವಾಗಿದೆ. ಇಲ್ಲಿನ ಜನರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಇನ್ನು ಸುಧಾರಿಸಬೇಕಿದೆ. ಮುಖ್ಯವಾಗಿ ಇಲ್ಲಿನ ಜನತೆಗೆ ಉತ್ತಮವಾದ ಆರೋಗ್ಯ ಸೌಕರ್ಯ ದೊರೆಯಬೇಕಿದೆ. ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಬಗ್ಗೆ ಸಾಕಷ್ಟು ಭರವಸೆ ಇದೆ. ಇದನ್ನು ಅರ್ಥೈಸಿಕೊಳ್ಳಬೇಕು. ಅವ್ಯವಹಾರ ನಡೆಸಿ ಯಾರಾದರು ಸಂಸ್ಥೆಯ ಹೆಸರಿಗೆ ಮಸಿ ಬಳಿದರೆ ಯಾರೇ ಇರಲಿ ಅಂತವರ ವಿರುದ್ಧ ಮುಲಾಜಿಲ್ಲದೇ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಸ್ಥೆಯಲ್ಲಿ ಈಗಾಗಲೇ ರಚನೆಯಾಗಿರುವ ಎಲ್ಲ ಸಮಿತಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲೇಜುಗಳಲ್ಲಿ ಪಿಡುಗಾಗಿ ಪರಿಣಮಿಸಿದ ರಾಗಿಂಗಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಒತ್ತಡ ಮುಕ್ತ ವಾತಾವರಣ ಇರುವ ಹಾಗೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಬದಲಾದ ಕಾಲಘಟ್ಟದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಸಾಕಷ್ಟು ಮಹತ್ವ ಬರುತ್ತಿದೆ. ಬಹಳಷ್ಟು ನಿರೀಕ್ಷೆಯೊಂದಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ತೆಗೆದುಕೊಳ್ಳುವ ವಿದ್ಯಾರ್ಥಿಗಳ ಮನೋಭಾವನೆ ಅರಿತು ಅವರಿಗೆ ಗುಣಮಟ್ಟದ ರೀತಿಯ ಬೋಧನಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವರು ಎಲ್ಲ ವಿಭಾಗಗಳ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರಿಗೆ ಸಲಹೆ ಮಾಡಿದರು.

ಸಂಸ್ಥೆಯ ಕಟ್ಟಡ ನಿರ್ಮಾಣ, ಸದ್ಯದ ಪರಿಸ್ಥಿತಿ, ಈ ಹಿಂದೆ ಕರೆದ ಟೆಂಡರಗಳ ಸ್ಥಿತಿಗತಿ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಚಿವರು ಚರ್ಚಿಸಿದರು.

ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಒಟ್ಟು 81 ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ಈಗಾಗಲೇ 49 ಹುದ್ದೆಗಳು ಭರ್ತಿಯಾಗಿವೆ. 32 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆಯ ನಿರ್ದೇಶಕರಾದ ವಿಶ್ವನಾಥ ಇಟಗಿ ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಹೇಮಲತಾ ನಾಯಕ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಸುಜಾಥಾ ರಾಠೋಡ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಉಪಸ್ಥಿತರಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago