ಸುರಪುರ: ಕಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಖಂಡಿಸಿ ನಗರದ ತಹಸಿಲ್ದಾರ್ ಕಚೇರಿ ಮುಂದೆ ಖಾಸಗಿ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ಸಂಘ ದಿಂದ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಕಲ್ಕತ್ತಾದಲ್ಲಿ ನಡೆದಿರುವ ಪೈಶಾಚಿಕ ಕೃತ್ಯ ಮಾನವ ಸಮಾಜ ತಲೆ ತಗ್ಗಿಸುವಂತಿದೆ.ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಮತ್ತೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕಾನೂನುಗಳನ್ನು ಸರಕಾರ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ನಂತರ ರಾಜ್ಯ ಆರೋಗ್ಯ ಸಚಿವರಿಗೆ ಬರೆದ ಮನವಿಯನ್ನು ತಹಸಿಲ್ದಾರ ಕಚೇರಿ ಸಿರಸ್ತೆದಾರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಲ್ಲಯ್ಯ ನಿಂಗದಳ್ಳಿ,ಉಪಾಧ್ಯಕ್ಷ ಶಶಿಕಾಂತ ಜ್ಯೋಶಿ,ಪ್ರಧಾನ ಕಾರ್ಯದರ್ಶಿ ಭೀಮರಾಯ,ಸಹ ಕಾರ್ಯದರ್ಶಿ ಭೀಮಾಶಂಕರ ಜುಜಾರೆ,ಬೆಳ್ಳಿಯಪ್ಪ,ವಾಸಿಂ,ಅಬ್ದುಲ್ ಶೇಖ್,ರಾಹುಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…