ಕಲಬುರಗ; ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (ಕಾನೂನು ಕ್ರಮ ಜರಗಿಸುವುದು) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿಸಿ ನೀಡಿರುವ ಬೆಳವಣಿಗೆಯ ಹಿಂದೆ ಬಿಜೆಪಿಯ ದ್ವೇಷದ ರಾಜಕಾರಣ ಅಡಗಿದೆ, ಜನರಿಂದ ಆಯಕೆಯಾದ ರಾಜ್ಯ ಕಾಂಗ್ರೆಸ್‌ನ ಬಹಮತದ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಇದಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಜೇವರ್ಗಿ ಶಾಸಕ ಡಾ. ಅಜಯ್ ಧರ್ಮಸಿಂಗ್ ಆಕ್ರೋಶ ಹೊರಹಾಕಿದ್ದಾರೆ.
ದ್ವೇಷದ ರಾಜಕಾರವನ್ನೇ ಉಸಿರಾಡುತ್ತಿರುವ ಬಿಜೆಪಿ ನಾಯಕರು ರಾಜಭವನವನ್ನು ಹಾಗೂ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಜನಪರ ಹಾಗೂ ಜನಕಲ್ಯಾಣಕ್ಕಾಗಿ ನಿರಂತರ ಶ್ರಮದಿಂದ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿಸಿರುವ ರಾಜ್ಯಪಾಲರ ನಡೆಯನ್ನು ತಾವು ಖಂಡಿಸೋದಾಗಿ ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ರಾಜ್ಯಪಾಲರ ನೋಟೀಸ್‌ಗೆ ಜುಲೈ 26 ರಂದು ಈ ಬಗ್ಗೆ ಸರ್ಕಾರ ನೂರು ಪುಟಗಳ ಉತ್ತರ ಸಲ್ಲಿಸಿದೆ. ಅದೇ ದಿನ ಅಬ್ರಾಹಂ ದೂರು ದಾಖಲಿಸಿದ ಕೂಡಲೇ ರಾಜ್ಯಪಾಲರು ಸಿಎಂ ಗೆ ನೋಟಿಸು ಕೊಡುತ್ತಾರೆ. ಸರ್ಕಾರದ ಉತ್ತರವನ್ನು ಕೂಡಾ ಪರಿಶೀಲನೆ ನಡೆಸದೆ, ಕೇವಲ ಖಾಸಗಿ ದೂರು ದಾಖಲಿಸಿದ ತಕ್ಷಣ ಶೋಕಾಸ್ ನೋಟಿಸು ನೀಡಲಾಗಿದೆ. ದೂರದಾರರ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರ, ಪ್ರಕರಣವೊಂದರಲ್ಲಿ ಅವರಿಗೆ ಸುಪ್ರಿಂ ಕೋರ್ಟ್ ದಂಡ ಹಾಕಿದೆ. ಅಂತವರ ಮಾತು ರಾಜ್ಯಪಾಲರು ಕೇಳುತ್ತಾರೆ ಎಂದರೆ ಮೇಲಿನಿಂದ ಅವರಿಗೆ ಆದೇಶ ಬಂದಿದೆ. ರಾಜ್ಯಪಾಲರು ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ರಾಜಭವನ ದುರಪಯೋಗವಾಗುತ್ತಿದೆ ಎಂದು ಡಾ. ಅಜಯ್ ಸಿಂಗ್ ಆತಂಕ ಹೊರಹಾಕಿದ್ದಾರೆ.
ಜನಪ್ರೀಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯವರ ದ್ವೇಷದ ಮನೋಭಾವನೆ ಸರಿಯಲ್ಲ, ಗೌರವಾನ್ವಿತ ರಾಜ್ಯಪಾಲರು ಷೋಕಾಸ್ ನೋಟಿಸ್ ಹಿಂಪಡೆದು, ರಾಜ್ಯದ ಜನರು ಆಶೀರ್ವದಿಸಿ ಅಧಿಕಾರಕ್ಕೆ ತಂದ ಕಾಂಗ್ರೆಸ್ ಸರಕಾರಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಡಾ. ಅಜಯ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಸಹಿಸದೇ, ಬಿಜೆಪಿ-ಜೆಡಿಎಸ್ ಪಕ್ಷಗಳು ನಿರಂತರವಾಗಿ ಕುತಂತ್ರಗಳನ್ನು ಮಾಡುತ್ತಲೇ ಇವೆ. ಮುಡಾ ನಿವೇಶನಕ್ಕೆ ಸಂಬಂಧಿಸಿದ ಸುಳ್ಳು ಆರೋಪ ಹಾಗೂ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಕೂಡ ಈ ಕುತಂತ್ರದ ಭಾಗವಾಗಿದೆ.
ನಿರಾಧಾರ ಆರೋಪ ಹೊರಿಸಲು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಿಜೆಪಿಯು ಅತ್ಯಂತ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಜನಪರ ಆಡಳಿತ ಮುಂದುವರಿಯಲು ಅಗತ್ಯ ಸಹಕಾರ ನೀಡಿ ನಾಡಿನ ಅಭಿವೃದ್ಧಿಗೆ ಕೈಜೋಡಿಸಬೇಕಿದ್ದ ರಾಜ್ಯಪಾಲರೇ ಈಗ ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿರುವುದು ನಿಜಕ್ಕೂ ದುರಂತ.
ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಮೂಲಕ ಲಕ್ಷಾಂತರ ಬಡ-ಮಧ್ಯಮ ಕುಟುಂಬಗಳಿಗೆ ಆಶಾಕಿರಣವಾಗಿರುವ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಜೊತೆ ನಾವಿದ್ದೇವೆ. ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲವೆಂದೂ ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…