ಕಲಬುರಗಿ: ಮಾಜಿ ಸಚಿವ ಎಸ್.ಕೆ.ಕಾಂತಾ ಅವರಿಗೆ ರಾಜ್ಯ ಸರ್ಕಾರವು 2024-25ನೇ ಸಾಲಿನ ರಾಜ್ಯ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಿ ಸರ್ಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಲಹೆಗಾರರು ಹಾಗೂ ಶಾಸಕ ಬಿ.ಆರ್.ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ, ಮಾಜಿ ಸಚಿವ ರೇವೂನಾಯಕ ಬೇಳಮಗಿ, ಕಾಂಗ್ರೇಸ್ ಮುಖಂಡರಾದ ರಾಜಕುಮಾರ ಕಪನೂರ, ಲಚ್ಚಪ್ಪ ಜಮಾದಾರ ಅವರು ಕಲಬುರಗಿಯಲ್ಲಿನ ಎಸ್.ಕೆ.ಕಾಂತಾ ಅವರ ಮನೆಗೆ ಭೇಟಿ ನೀಡಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಅವರನ್ನು ಸನ್ಮಾನಿಸಿದರು.
ಆಗಸ್ಟ್ 20ರಂದುಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್. ಕೆ.ಕಾಂತಾ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡುವರು.
ಡಿ.ದೇವರಾಜ ಅರಸು ಅವರತತ್ವ ಸಿದ್ದಾಂತ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಅನುಷ್ಠಾನಕ್ಕೆ ತರಲು ಶ್ರಮಿಸುವವರಿಗೆ ಪ್ರತಿ ವರ್ಷ 5 ಲಕ್ಷ ರೂ. ಮೊತ್ತ ಮತ್ತು ಪ್ರಶಸ್ತಿ ಪತ್ರ ಒಳಗೊಂಡ ಈ ಪ್ರತಿಷ್ಟಿತ ಪ್ರಶಸ್ತಿ ರಾಜ್ಯ ಸರ್ಕಾರ ಕೊಡಮಾಡುತ್ತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…