ಕಲಬುರಗಿ: ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಚುನಾಯಿತ ಸರಕಾರಗಳನ್ನು ರಾಜ್ಯಪಾಲರ ಮೂಲಕ ಅಸ್ಥಿರಗೋಳಿಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕ ಬಾಬು ಹೊನ್ನಾ ನಾಯಕ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿಯವರು ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ್ದಾರೆ ಜನಪರವಾದ ಆಡಳಿತ ನೀಡುತ್ತಾ ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಸ್ ಲೀಡರ ಆಗಿದ್ದು, ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿಯವರು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ ಎಂದಿದ್ದಾರೆ.
ರಾಜ್ಯಪಾಲರ ಮುಂದೆ ಹಿಂದಿನ ಸರಕಾರದ ಹಲವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯುಷನ್ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳು ಬಾಕಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲಿ ತರಾತುರಿಯಿಂದ ಕ್ರಮಕೈಕೊಳ್ಳಲಾಗಿರುವುದು ರಾಜಕಿಯ ಪ್ರೇರಿತವಾಗಿದೆ. ಕೇಂದ್ರ ಸರಕಾರಕ್ಕೆ ಮಣಿದು ರಾಜ್ಯಪಾಲರು ಪ್ರಾಸಿಕ್ಯುಷನ್ ಗೆ ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರಕಾರವನ್ನು ಅಸ್ತಿರಗೊಳಿಸುವ ವ್ಯವಸ್ಥಿತ ಹುನ್ನಾರ ಆಗಿದೆ. ರಾಜ್ಯದ ಜನತೆ ಇದನ್ನು ಕ್ಷಮಿಸುವದಿಲ್ಲ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…