ಬಿಸಿ ಬಿಸಿ ಸುದ್ದಿ

ಯುವಕರು ಬದುಕುವ ಕಲೆ ಬೆಳೆಸಿಕೊಳ್ಳಿ: ಬಸವಲಿಂಗ ದೇವರು

ಸುರಪುರ: ನಗರದ ಡಾ ಬಾಬಾಸಾಹೇಬ ಅಂಬೇಡ್ಕರ್ ವಿದ್ಯಾವರ್ಧಕ ಸಂಘ, ಅರುಂಧತಿ ಡಿ ಎಲ್ ಇಡಿ ಕಾಲೇಜ್ ರಂಗಂಪೇಟ್ ಇವರ ಸಂಯುಕ್ತಾಶ್ರಯದಲ್ಲಿ, ಶಿಕ್ಷಕರ ದಿನಾಚರಣೆ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಂದ ಸ್ವಾಗತ ಸಮಾರಂಭ ಜರುಗಿತು. ಈ ಕಾರ್ಯಕ್ರಮಕ್ಕೆ ಉಧ್ಘಾಟಕರಾಗಿ ಪರಮ ಪೂಜ್ಯ ಶ್ರೀ ಬಸವಲಿಂಗ ದೇವರು ಶ್ರೀಗಿರಿ ಮಠ ಲಕ್ಷ್ಮೀಪುರ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪ್ರಶಿಕ್ಷಣಾರ್ಥಿಗಳಿಗೆ ಆಶೀರ್ವಚನ ನೀಡಿ ಇಂದಿನ ಯುವ ಪೀಳಿಗೆಗೆ ಬದುಕುವ ಕಲೆಯನ್ನು ಬೆಳೆಸಿಕೊಳ್ಳಬೇಕು ದಾಸ್ಯ ಜೀವನದ ದಾರಿಯನ್ನು ತುಳಿಯದೆ ಹಿರಿಯರ ಮಾರ್ಗದರ್ಶನದಂತೆ ನಡೆ ನುಡಿಗಳನ್ನು ಸ್ಪಷ್ಟವಾಗಿಟ್ಟುಕೊಳ್ಳಬೇಕು ಎಂದರು.

ಮುಖ್ಯ ಅಥಿತಿಗಳಾಗಿ ಕರಬಸಯ್ಯ ದಂಡಗಿಮಠ ಪ್ರಾಂಶುಪಾಲರು ವಿಧ್ಯಾವರ್ಧಕ ಡಿ ಎಲ್ ಇಡಿ ಕಾಲೇಜ್ ಸೈದಾಪುರ ಇವರು ಆಗಮಿಸಿ, ಪ್ರಶಿಕ್ಷಣಾರ್ಥಿಗಳಿಗೆ ಜ್ಞಾನದ ಕ್ಷಿತಿಜವನ್ನು ಹೆಚ್ಚಿಸುವಂತಹ ಮಾರ್ಗದರ್ಶನ ನೀಡಿದರು
ಇದೇ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ ಸಿದ್ದಣ್ಣ ದಿಗ್ಗಿ ಮಾತನಾಡಿ, ಬಾವಿ ಶಿಕ್ಷರಾಗುವ ತಾವುಗಳು ಇತಿಹಾಸದ ಅರಿವನ್ನು ಬೆಳೆಸಿಕೊಳ್ಳಬೇಕು ಆ ಮೂಲಕ ಮಕ್ಕಳಿಗೆ ಇತಿಹಾಸದ ಜ್ಞಾನವನ್ನು ಹೆಚ್ಚಿಸಬೇಕೆಂದರು.

ಕಾರ್ಯಕ್ರಮಕ್ಕೆ ಅಥಿಗಳಾಗಿ ಕರ್ನಾಟಕ ಬಿ ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರಿ ರೇಣುಕಾ ಕನಕಗಿರಿ ಆಗಮಿಸಿ ಪ್ರಶಿಕ್ಷಣಾರ್ಥಿಗಳಿಗೆ ಶಿಸ್ತು ಅತ್ಯವಶ್ಯಕ ಎಂದು ನುಡಿದರು. ಇದೇ ಸಂದರ್ಭದಲ್ಲಿ ಡಾ ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ ಗಂಗಾಧರ ರುಮಾಲ ಅವರು ಸ್ವಾವಲಂಬನೆಯ ಆರ್ಥಿಕಾಬಿವೃದ್ದಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಹೊಂದಬೇಕೆಂದರು .

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷರಾದ ರಾಮರಡ್ಡೆಪ್ಪ ಬಿಜಾಸಪುರ ಇವರಿಗೆ ಕಾಲೇಜಿನ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅದ್ಯಕ್ಷರ ಅನುಪಸ್ಥಿಯಲ್ಲಿ ಡಿ ಇಡಿ ಕಾಲೇಜಿನ ಪ್ರಾಂಶುಪಾಲರಾದ ತಿಪ್ಪಣ್ಣ ದೊಡ್ಡಮನಿ ಅವರು ವಹಿಸಿ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಬೆಳಕು ನೀಡಿ ಜೊತೆಗೆ ಸಾವಿರಾರು ಜನರಿಗೆ ಅನ್ನವನ್ನು ನೀಡಿದ ನಮ್ಮ ಈ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದು ಭಾವನಾತ್ಮಕವಾಗಿ ನುಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಭೀಮಪ್ಪ ಎನ್ ದೊಡ್ಡಮನಿ ಅವರು ಪ್ರಾಸ್ತಾವಿಕವಾಗಿ ವಿದ್ಯಾರ್ಥಿಗಳು ಈ ದೇಶದ ಹೊಳೆಯುವ ನಕ್ಷತ್ರಗಳಿದ್ದಂತೆ ಆ ಹೊಳಪು ಇನ್ನಷ್ಟು ಗಟ್ಟಿಗೊಳ್ಳಲು ಸತತ ಅಧ್ಯನಶೀಲರಾಗಿರಬೇಕು ಎಂದರು. ಕಾಲೇಜಿನ ಉಪನ್ಯಾಸಕರಾದ ಕಾಶೀಬಾಯಿ ಟಿ ದೊಡ್ಡಮನಿ ಹಾಗೂ ಶ್ರೀ ಲಕ್ಷ್ಮಣ ನಡಕೂರ ಅವರು ವಿದ್ಯಾರ್ಥಿಗಳ ಕುರಿತು ಮಾತನಾಡಿದರು. ಪ್ರಿಯದರ್ಶಿನಿ ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ ಚಾಮನಾಳ ಅವರು ಹಾಜರಿದ್ದರು.

ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಹಾಗಯೆ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ ಹಣಮಂತ ಕಕ್ಕೇರಾ ಮತ್ತು ಎಲ್ಲಾ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಸ್ವಾಗತವನ್ನು ಕುಮಾರಿ ಶೋಭಾ ವಂದನೆಯನ್ನು ಕುಮಾರಿ ಮಂಜುಳಾ ನಿರೂಪಣೆಯನ್ನು ಕುಮಾರ ಯಲ್ಲಪ್ಪ ನಿರ್ವಹಿಸಿದರು.ಇದೆ ಸಂದರ್ಭದಲ್ಲಿ ಅನೇಕ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

1 hour ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago