ಕಲಬುರಗಿ; ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಬಿಜೆಪಿ ಏಜೇಂಟರಂತೆ ವರ್ತಿಸಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಹಾಗೂ ಕೇಂದ್ರ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ಕಾಂಗ್ರೆಸ್ ರಾಜ್ಯ ಸರಕಾರದ ವಿರುದ್ಧ ನಡೆಸುತ್ತಿರುವ ಪಿತೂರಿಯನ್ನು ಖಂಡಿಸಿ ಆ. 19 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಹೇಳಿದ್ದಾರೆ.
ಈ ಪ್ರತಿಭಟನೆಯು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರಟು ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ಘನತೆವೆತ್ತ ರಾಷ್ಟ್ರಪತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವದು.
ಈ ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ/ಮಂಡಳಿ ಅಧ್ಯಕ್ಷರು, ಪಕ್ಷದ ಜಿಲ್ಲಾ ಹಾಗೂ ತಾಲ್ಲೂಕಾ ಅಧ್ಯಕ್ಷರು, ಪದಾಧಿಕಾರಿಗಳು, ಬಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳು, ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು, ಸದಸ್ಯರು, ಮಹಿಳೆಯರು, ಯುವಕರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಗಳು ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಂಪ್ರಭು ಪಾಟೀಲರು ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…