ಕಲಬುರಗಿ : ದುಬಾರಿ ಔಷದಿಗಳು ಬಡಜನರ ಆರೋಗ್ಯದ ಹಕ್ಕು ಕಸಿಯಬಾರದು, ಜನಸಾಮಾನ್ಯರಿಗೂ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ದೊರಕಬೇಕೆಂಬ ಮಹತ್ವದ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಜನೌಷಧಿ ಕೇಂದ್ರ ಸ್ಥಾಪಿಸಿದರು. ಸ
ದ್ಯ 8,900 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿಂದ ಪ್ರತಿದಿನ 20 ಲಕ್ಷ ಕ್ಕೂ ಹೆಚ್ಚು ಬಡ ಕುಟುಂಬಗಳು ಪ್ರಯೋಜನ ಪಡೆದುಕೊಳ್ಳುತ್ತಿವೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡುವುದಿಲ್ಲವೆಂಬ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ಹೇಳಿಕೆ ಬಡವರ ಆರೋಗ್ಯದಲ್ಲೂ ರಾಜಕಾರಣದ ಚೆಲ್ಲಾಟವಾಡುವಂತಿದೆ ಎಂದು ಕಲಬುರಗಿ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಕಿಡಿಕಾರಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಅನ್ನ, ಅಕ್ಷರ ಆರೋಗ್ಯದ ವಿಷಯದಲ್ಲೂ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿಯುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ನಡೆ ಮಾನವೀಯ ಮೌಲ್ಯವಿಲ್ಲದ ಜನವಿರೋಧಿಯಲ್ಲದೇ ಬೇರೇನೂ ಅಲ್ಲ. ಖಾಸಗಿ ಲಾಭಿಗಳ ಒತ್ತಡ ಹಾಗೂ ಪ್ರಭಾವಗಳಿಗೆ ಮಣಿದು ಬಡವರಿಗೆ ದ್ರೋಹ ಬಗೆಯಲು ಹೊರಟರೆ ಜೆಡಿಎಸ್ ಪಕ್ಷ ಕೈ ಕಟ್ಟಿ ಕೂರದು, ತಕ್ಷಣ ಸಚಿವರು ಹೇಳಿಕೆ ಹಿಂಪಡೆದು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜನೌಷಧಿ ಕೇಂದ್ರಗಳಿಗೆ ಅಡ್ಡಿಪಡಿಸುವ ನಿಲುವನ್ನು ಬದಲಿಸಿಕೊಳ್ಳುವಂತೆ ಆಗ್ರಹಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…