ಪ್ರಾಸಿಕ್ಯೂಷನ್ ವಿರುದ್ಧ ಕಲಬುರಗಿಯಲ್ಲಿ ಭುಗ್ಗಿಲ್ಲೆದ ಆಕ್ರೋಶ
ಕಾಂಗ್ರೆಸ್ ಶಾಸರಕ ನೇತೃತ್ವದಲ್ಲಿ ರಾಜ್ಯಪಾಲರ ವಿರುದ್ಧ ಪ್ರತಿಭಟನೆ
ಕಲಬುರಗಿ: ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದು ವಿರೋಧಿಸಿ ಕಲಬುರಗಿಯಲ್ಲಿ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಟೈಯರ್ ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿದರು.
ರಾಜ್ಯಪಾಲರು ಕೇಂದ್ರದ ಬಿಜೆಪಿ ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ಬ್ಲಾಕ್ ಮೇಲೆ ಮಾಡುವಂತ ಸಾಮಾನ್ಯ ವ್ಯಕ್ತಿಯ ದೂರನ್ನು ಆಧರಿಸಿ ರಾಜ್ಯಪಾಲರು ಪ್ರಜಾಸತಾತ್ಮಕವಾಗಿ ಆಯ್ಕೆಯಾಗಿರುವ ಸರಕಾರವನ್ನು ಅಸ್ಥಿರಗೊಳಿಸುವ ಕುಟಿಲುತನಕ್ಕೆ ಕೈ ಹಾಕಿ ರಾಜ್ಯಪಾಲರು ಸಂವಿಧಾನ ವಿರೋಧಿ ನಡೆಯನ್ನು ಹೊಂದಿದ್ದಾರೆ ಎಂದು ಮುಖ್ಯಮಂತ್ರಿಗಳ ಸಲಗೆಗಾರರಾದ ಶಾಸಕ ಬಿ.ಆರ್ ಪಾಟೀಲ್ ಕಲಬುರಗಿ ಜಿಲ್ಲಾಧಿಕಾರಿಗಳ ಮುಖ್ಯಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿ ಆರೋಪಿಸಿದರು.
ಸೋಮವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಬಿಜೆಪಿ ಅತ್ಯಂತ ಭ್ರಷ್ಠ ಮತ್ತು ಸಂವಿಧಾನ ವಿರೋಧಿ ಪಕ್ಷವಾಗಿದೆ. ಮೂಡ ಹಗರಣ ಕಾಂಗ್ರೆಸ್ ಸರಕಾರದಲ್ಲಿ ವಲ್ಲದೇ ಬಿಜೆಪಿ ಸರಕಾರದಲ್ಲಿ ನಡೆದಿರುವಂತಹ ಹಗರಣವನ್ನು ಮುಖ್ಯಮಂತ್ರಿಗಳ ತಲೆಗೆ ಕಟ್ಟುವ ಕುಂತಂತ್ರವನ್ನು ಬಿಜೆಪಿ ಮಾಡುತ್ತಿದೆ. ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರು ಬಿಜೆಪಿ ಆಡಳಿತ ವಲ್ಲದ ರಾಜ್ಯಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸರಕಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ ಈಡಿ ದೇಶಕ್ಕೆ ಗೊತ್ತು.
ಇದೀಗ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜನರ ಮನೆಗೆ ತಲುಪಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿರುವುದು ಸಹಿಸದ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ರಾಜ್ಯಪಾಲರನ್ನು ಬಳಿಸಿಕೊಂಡು ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸ ಮುಂದಾಗಿದ್ದಾರೆ. ಕಾಂಗ್ರೆಸ್ ಮತ್ತು ಇಂಡಿಯಾ ಅಲೈನ್ಸ್ ನಾಯಕರು ನೇತೃತ್ವದಲ್ಲಿ ನಮ್ಮ ಹೋರಾಟ ಮುಂದುವರೆಯಲ್ಲಿದೆ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಪ್ರತಿಭಟನೆಯಲ್ಲಿ ಅಖಿಲ ಭಾರತೀಯ ಕಿಸಾನ ಸಭಾದ ರಾಜ್ಯ ಕಾರ್ಯದರ್ಶಿ ಮೌಲಾ ಮುಲ್ಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದರು.
ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ, ಶಾಸಕ ಅಲ್ಲಮಪ್ರಭು ಪಾಟೀಲ್, ಎಂವೈ ಪಾಟೀಲ್, ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ, ಕಾಂಗ್ರೆಸ್ ಪಕ್ಷ ರಾಜ್ಯ ಉಪಾಧ್ಯಕ್ಷ ಸುಭಾಷ್ ರಾಠೋಡ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಮ್ ಖಾನ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ಮಹೆಮೂದ್ ಪಟೇಲ್ ಸಾಸರಗಾಂವ,ಈರಣ್ಣ ಝಳಕಿ, ಶಿವಾನಂದ ಹುನಗುಂಟ, ಮಹಾಂತೇಶ್ ಕೌವುಲ್ಗಾ, ನಿಲ್ಲಕಂಠ ಮುಲ್ಗಿ, ವಾಹಾಜ್ ಬಾಬಾ, ಮಹಿಳಾ ಕಾಂಗ್ರೆಸ್ ಸದಸ್ಯ ಗೀತಾ ಮುಧೋಳ, ಲಛಪ್ಪ ಜಮಾದಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.