18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಡಿ.ಸಿ.ಮನವಿ

0
327

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ ಆಗಸ್ಟ್ 20 ರಿಂದ ಆರಂಭವಾಗಲಿದ್ದು, 18 ವರ್ಷ ಮೇಲ್ಪಟ್ಟ ಅರ್ಹ ಯುವಕ-ಯುವತಿಯರು ಮತದಾರರ ಪಟ್ಟಿಯಲಿ ಹೆಸರು ಸೇರಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

ಆಗಸ್ಟ್ 20 ರಿಂದ ಅಕ್ಟೋಬರ್ 18ರ ವರೆಗೆ ಬಿ.ಎಲ್.ಓ.ಗಳಿಂದ ಮನೆ-ಮನೆ ಭೇಟಿ, ಚುನಾವಣಾ ಗುರುತಿನ ಚೀಟಿಯಲ್ಲಿ ದೋಷ ಸರಿಪಡಿಸುವಿಕೆ, ಮತಗಟ್ಟೆ ಮತ್ತು ಭಾಗದ ವ್ಯಾಪ್ತಿ ಪರಿಷ್ಕರಣೆ ಕಾರ್ಯ ಕೈಗೊಂಡು ಅಕ್ಟೋಬರ್ 29 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ ಎಂದರು.

Contact Your\'s Advertisement; 9902492681

ಕರಡು ಮತದಾರರ ಪಟ್ಟಿಗೆ ಅಕ್ಟೋಬರ್ 29 ರಿಂದ ನವೆಂಬರ್ 28ರ ವರೆಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 24 ರೊಳಗೆ ಬಂದಂತಹ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ 2025ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

*ವಿ.ಎಸ್.ಪಿ. ಮೂಲಕ ಹೆಸರು ನೊಂದಾಯಿಸಿಕೊಳ್ಳಬಹುದು:*

18 ವರ್ಷ ಮೇಲ್ಪಟ್ಟ ಅರ್ಹ ಮತದಾರರು ವೋಟರ್ ಹೆಲ್ಪ್ ಲೈನ್, ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಆನ್‌ಲೈನ್ ಅಥವಾ ಬಿ.ಎಲ್.ಓ. ಬಳಿ ನಮೂನೆ-6 ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಬಹುದಾಗಿದೆ. ಡಬಲ್ ಎಂಟ್ರಿ ಮತ್ತು ನಿಧನ ಪ್ರಕರಣದಲ್ಲಿ ನಮೂನೆ-7ರ ಮೂಲಕ ತೆಗೆದುಹಾಕಲು ಮತ್ತು ನಮೂನೆ-8ರಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here