ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಲೇಖಕಿ ಪ್ರಮೀಳಾ ಜಾನಪ್ಪಗೌಡ ಅವರನ್ನು ಪರಿಷತ್ತಿನ ವತಿಯಿಂದ ಅವರ ಹಣ್ಣು ಹಂಪಲು ನೀಡಿ ಅಧಿಕೃತ ಆಹ್ವಾನ ನೀಡಲಾಯಿತು.
ಆಹ್ವಾನ ಸ್ವೀಕರಿಸಿ ಮಾತನಾಡಿದ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷೆ ಪ್ರಮೀಳಾ ಜಾನಪ್ಪಗೌಡ, ಎಲ್ಲ ಪ್ರಕಾರದ ಸಾಹಿತ್ಯಕ್ಕೆ ಜಾನಪದವೇ ಮೂಲವಾಗಿದೆ. ಹಿಮದೆ ಜಾನಪದ ಸಾಹಿತ್ಯದಲ್ಲಿ ಮಹಿಳೆಯರು ಹೆಚ್ಚು ಸಕ್ರೀಯರಾಗಿದ್ದಾರೆ. ಸಾಹಿತ್ಯ ಸಂಸ್ಕøತಿಯ ಹಲವು ಪ್ರಕಾರಗಳು ಮಹಿಳೆಯರಿಂದಲೇ ಜನ್ಮತಾಳಿವೆ. ಮಹಿಳೆಯರು ಸಾಹಿತ್ಯವನ್ನು ಅಭಿವ್ಯಕ್ತಗೊಳಿಸುವಲ್ಲಿ ಎಂದೂ ಹಿಂದೆ ಬಿದ್ದಿಲ್ಲ. ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಲ್ಪ ಕೊಡುಗೆಯನ್ನು ಗುರುತಿಸಿ ನನ್ನನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಸ್ತ್ರೀ ಶಕ್ತಿಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದರು.
ಕಸಾಪ ತಾಲೂಕಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ ಮಾತನಾಡಿ, ಸಾಹಿತ್ಯ ಕ್ಷೇತ್ರಕ್ಕೆ ಸ್ತ್ರೀ ಶಕ್ತಿಯ ಕೊಡುಗೆ ಅಪಾರವಾಗಿದೆ. ಮಹಿಳೆಯಲ್ಲಿನ ಶಕ್ತಿಯನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನದಿಂದ ಈ ಬಾರಿ ಹಿರಿಯ ಲೇಖಕಿಯೊಬ್ಬರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಜತೆಗೆ ಸ್ತ್ರೀ ಸ್ವಾತಂತ್ರ್ಯ ಸಮಾನತೆಗಳನ್ನು ಕುರಿತು ಅನೇಕ ಚಿಂತನೆಗಳನ್ನು ಅಭಿವ್ಯಕ್ತಿಗೊಳಿಸುವ ಉದ್ದೇಶ ಈ ಸಮ್ಮೇಳನ ಹೊಂದಿದೆ ಎಂದರು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ,. ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ಎ.ಕೆ. ರಾಮೇಶ್ವರ, ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ, ಜಾನಪ್ಪಗೌಡ ಚಿಂಚೋಳಿ, ಸ್ವಾಗತ ಸಮಿತಿಯ ಅಧ್ಯಕ್ಷ ವಿನೋದ ಪಾಟೀಲ ಸರಡಗಿ, ಕಾರ್ಯಾಧ್ಯಕ್ಷ ರಾಘವೇಂದ್ರ ಕಲ್ಯಾಣಕರ್, ರಾಜೇಂದ್ರ ಮಾಡಬೂಳ, ವಿಶಾಲಾಕ್ಷಿ ಮಾಯಣ್ಣವರ್, ಭಾಗ್ಯಶ್ರೀ ಮರಗೋಳ, ವಿಶ್ವನಾಥ ಯನಗುಂಟಿ, ಶಕುಂತಲಾ ಪಾಟೀಲ, ವಿನೋದಕುಮಾರ ಜೆ.ಎಸ್., ಶಿವಲಿಂಗಪ್ಪ ಅಷ್ಟಗಿ, ಕುಪೇಂದ್ರ ಬರಗಾಲಿ, ಸೋಮಶೇಖರಯ್ಯ ಹೊಸಮಠ, ಧರ್ಮರಾಯ ಜವಳಿ, ಮಲ್ಲಿಕಾರ್ಜುನ ಇಬ್ರಾಹಿಂಪುರ, ಗಣೇಶ ಚಿನ್ನಾಕಾರ, ರವೀಂದ್ರಕುಮಾರ ಭಂಟನಳ್ಳಿ, ಶರಣು ಹಾಗರಗುಂಡಗಿ, ಎಂ ಎನ್ ಸುಗಂಧಿ, ರೇವಯ್ಯಾ ಸ್ವಾಮಿ, ಕವಿತಾ ಕವಳೆ, ಸುನೀತಾ ಮಾಳಗೆ, ಚಂದ್ರಶೇಖರ ಮ್ಯಾಗೇರಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…