“ಸದ್ಭಾವನಾ ದಿನಾಚರಣೆ”

0
73

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಜನ್ಮ ದಿನವಾದ ಅಗಸ್ಟ್ ೨೦, ೨೦೨೪ ರಂದು ಸದ್ಭಾವನಾ ದಿನಾಚರಣೆಯನ್ನು ಆಚರಿಸುವದರೊಂದಿಗೆ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಇದೇ ಸಂದರ್ಭದಲ್ಲಿ ಜನರಲ್ಲಿ ಭಾಷೆ, ಧರ್ಮ ಮತ್ತು ಪ್ರಾದೇಶಿಕತೆ ಕುರಿತಾಗಿ ಸದ್ಭಾವನೆ ಮೂಡಿಸುವ ನಿಟ್ಟಿನಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಅವರು ಮಾತನಾಡುತ್ತಾ ಸೌಹಾರ್ದತೆ, ಸದ್ಭಾವನೆ ಇತ್ಯಾದಿಗಳೆಲ್ಲಾ ಈಗಿನ ದಿನಕ್ಕೆ ಅತಿ ಅಗತ್ಯವಾದದ್ದು. ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆಗಳ ಹೆಸರಿನಲ್ಲಿ ಒಡೆದು ಹೋಗುತ್ತಿರುವ ನಮ್ಮ ದೇಶಕ್ಕೆ ಏಕತೆ ತಂದು ಕೊಡುವುದೇ ಈ ಸೌಹಾರ್ದತೆ ಮತ್ತು ಸದ್ಭಾವನೆಗಳು. ದೇಶದ ಪ್ರತಿಯೊಬ್ಬ ಪ್ರಜೆಗಳು ಈ ಗುಣವನ್ನು ತಮ್ಮಲ್ಲಿ ಅಳವಡಿಸಿಕೊಂಡರೆ ನಮ್ಮ ದೇಶ ವಿಶ್ವದಲ್ಲಿಯೇ ಒಂದು ಪ್ರಬಲ ರಾಷ್ಟ್ರವಾಗುವುದರಲ್ಲಿ ಅನುಮಾನವಿಲ್ಲ ಎಂದು ಮಾತನಾಡಿ ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು.

Contact Your\'s Advertisement; 9902492681

ಸದರಿ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಕಾಶೀಬಾಯಿ, ಮಹಾನಂದಾ ಗೊಬ್ಬುರ, ಪ್ರೀಯಾ ನಿಗ್ಗುಡಗಿ,ಬಸವರಾಜ ಗೋಣಿ ಮತ್ತು ಶೈಲಜಾ ನಾಕೇದಾರ,ಅನೀತಾ ಪಾಟೀಲ, ಜ್ಯೋತಿ ಪಾಟೀಲ, ಜಗದೇವಿ ಚಿಕ್ಕೆಗೌಡ ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು ಎಂದು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here