ಹೈದರಾಬಾದ್ ಕರ್ನಾಟಕ

ಸಾರ್ವರ್ತಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಎಸ್ಎಫ್ಐ ರಾಜ್ಯ ಸಮ್ಮೇಳನ

ಹೊಸಪೇಟೆ: ಸಾರ್ವರ್ತಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಸೆಪ್ಟೆಂಬರ್ 17, 18, 19 ರಂದು ಚಿಕ್ಕಬಳ್ಳಾಪುರ ದಲ್ಲಿ ಎಸ್ಎಫ್ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಕರ್ನಾಟಕ ರಾಜ್ಯ ಸಮ್ಮೇಳನ ನಡೆಯಲಿದ್ದು, ರಾಜ್ಯ ಸಮಿತಿಯಿಂದ ಸಮ್ಮೇಳನದ ಲಾಂಛನವನ್ನು ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ನಲ್ಲಿ ಬಿಡುಗಡೆ ಮಾಡಲಾಯಿತು.

ಈ ವೇಳೆ ಮಾತನಾಡಿದ ರಾಜ್ಯಾದ್ಯಕ್ಷ ಅಮರೇಶ ಕಡಗದ್, ಭಾರತ ವಿದ್ಯಾರ್ಥಿ ಫೆಡರೇಷನ್ (SFI) ದೇಶದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಮಾಜವಾದದ ಆಶಯಗಳನ್ನೊತ್ತು, ವಿದ್ಯಾರ್ಥಿಗಳನ್ನು ಅಭ್ಯಾಸ, ಹೋರಾಟ ಮತ್ತು ತ್ಯಾಗ ಎಂಬ ಘೋಷವಾಕ್ಯದಡಿಯಲ್ಲಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆಯ ಉಳಿವಿಗಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುತ್ತಿರುವ ದೇಶದ ಅತಿದೊಡ್ಡ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆಯಾಗಿದೆ. ಬಡ, ಕೃಷಿ ಕೂಲಿಕಾರ್ಮಿಕರ, ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ನಿರಂತರ ಹೋರಾಟ ರೂಪಿಸುತ್ತಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗಕ್ಕಾಗಿ ಶ್ರಮಿಸುತ್ತಿದೆ ಎಂದರು.

ಆಳುವ ಸರ್ಕಾರಗಳು ದೇಶದ ಮತ್ತು ರಾಜ್ಯ ಬಜೆಟ್ ನಲ್ಲಿ ಶಿಕ್ಷಣಕ್ಕೆ ವರ್ಷದಿಂದ ವರ್ಷಕ್ಕೆ ಹಣಕಾಸನ್ನು ಕಡಿತ ಮಾಡುತ್ತಾ ಶಿಕ್ಷಣವನ್ನು ಬಲಹೀನಗೊಳಿಸಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಇಲ್ಲವೆ ಇತರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗೀ ಶಾಲೆಗಳಿಗೆ ಸೇರಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳಿಗೆ ಸಿಗುತ್ತಿದ್ದ ಬೈಸಿಕಲ್, ಪ್ರೋತ್ಸಾಹಧನ ದಂತಹ ಯೋಜನೆಗಳನ್ನು ಕೈಬಿಡಲಾಗುತ್ತಿದೆ. ಸರ್ಕಾರಿ ಶಾಲೆಯ ಮಕ್ಕಳಿಂದ ಹಣ ಸಂಗ್ರಹಣೆಗೆ ಮುಂದಾಗಿ ಖಾಸಗಿ ಶಾಲೆಗಳ ಪರವಾಗಿ ಯೋಜನೆಗಳನ್ನು, ಸಹಾಯಧನವನ್ನು ಬಿಡುಗಡೆಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಾಳ ಮಾತನಾಡಿ, ಬಡ,ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಸಿಗಬೇಕಾದ ವಿದ್ಯಾರ್ಥಿ ವೇತನ, ಫೆಲೋಷಿಪ್ ಗಳನ್ನು ನಿಲ್ಲಿಸಲಾಗುತ್ತಿದೆ. ವೃತ್ತಿ ಶಿಕ್ಷಣದ ತರಬೇತಿಗಳ ಹೆಸರಿನಲ್ಲಿ ದುಬಾರಿ ಖಾಸಗೀ ಕೇಂದ್ರಗಳು ಹುಲುಸಾಗಿ ಬೆಳೆಯುತ್ತಿವೆ. ದುಬಾರಿ ಶಿಕ್ಷಣ ಹಾಗೂ ಮಾನಸಿಕ ಒತ್ತಡಗಳ ಪರಿಣಾಮ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ಈ ಎಲ್ಲಾ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಮತ್ತು ವಿದ್ಯಾರ್ಥಿಗಳ ಸೌಹಾರ್ದತೆಗಾಗಿ ಆಗ್ರಹಿಸಿ ಚಿಕ್ಕಬಳ್ಳಾಪುರ ನಗರದಲ್ಲಿ 17,18,19 ಸೆಪ್ಟೆಂಬರ್ 2024 ರಂದು ಮೂರು ದಿನಗಳ ಕಾಲ ನಡೆಯುವ ಎಸ್.ಎಫ್.ಐ. 16 ನೇ ರಾಜ್ಯ ಸಮ್ಮೇಳನದಲ್ಲಿ ಚರ್ಚೆ ಮಾಡಿ ಸಾರ್ವತ್ರಿಕ ಶಿಕ್ಷಣದ ಪರವಾಗಿ ಶೈಕ್ಷಣಿಕ ನಿರ್ಣಯಗಳನ್ನು ಕೈಗೊಳ್ಳಲಾಗುವುದು.

ವಿದ್ಯಾರ್ಥಿ ಚಳುವಳಿಗೆ ಸಲಹೆ, ಸಹಕಾರ, ಪ್ರೋತ್ಸಾಹ ನೀಡುತ್ತಾ ಬಂದಿರುವ ವಿದ್ಯಾರ್ಥಿ ಸ್ನೇಹಿತರು, ಶಿಕ್ಷಕ-ಉಪನ್ಯಾಸಕರು, ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ಪ್ರಗತಿಪರರು, ಬುದ್ದಿಜೀವಿಗಳು, ಸಮಾನತೆ-ಸೌಹಾರ್ದತೆ ಬಯಸುವ ಎಲ್ಲಾ ಜೀವಪರ ಚಳುವಳಿಗಾರರು ಈ ಸಮ್ಮೇಳನದ ಯಶಸ್ವಿಗೆ ಸಂಪೂರ್ಣ ಸಹಕಾರವನ್ನು ನೀಡಬೇಕೆಂದು 16 ನೇ ರಾಜ್ಯ ಸಮಿತಿ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್, ಎಸ್ಎಫ್ಐ ರಾಜ್ಯ ಪದಾಧಿಕಾರಿಗಳಾದ ರಮೇಶ ವೀರಾಪೂರು, ಗಣೇಶ ರಾಠೋಡ್, ದೊಡ್ಡ ಬಸವರಾಜ ಗುಳೇದಾಳ, ಗ್ಯಾನೇಶ ಕಡಗದ, ಶಿವಪ್ಪ ಕೋಲಾರ, ಸೋಮಶೇಖರ್, ರಾಜ್ಯ ಸಮಿತಿ ಸದಸ್ಯರಾದ ಸುಜಾತಾ, ಅನುಶಾ, ಶಿವಾರಡ್ಡಿ, ಶಿವಮಾರ್ ಈಚನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago