ಸ್ಲಂ ಜನಾಂದೋಲನ ಸಂಘಟನೆಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

0
74

ಕಲಬುರಗಿ: ಹೊಸ ಪಡಿತರ ಚೀಟಿ ನೀಡುವ ನಿಯಮ ಸರಳೀಕರಣಗೊ- ಳಿಸಬೇಕು ಹಾಗೂ ನೈಜ ಫಲಾನುಭ- ವಿಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಬೇಕು ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಸಂಘಟನೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

‘ಗ್ಯಾರಂಟಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಲಕ್ಷಾಂತರ ಜನ ಅರ್ಜಿ ಸಲ್ಲಿಕೆ ಮಾಡಿರುವುದನ್ನು ಗಮನಿಸಿದ ಸರ್ಕಾರ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಭಾವಿಸಿ ಆನ್‍ಲೈನ್ ಪೆÇೀರ್ಟಲ್ ಬಂದ್ ಮಾಡಿದೆ. ಇದರಿಂದ ನೈಜ ಬಡಜನರು ಹೊಸ ಪಡಿತರ ಚೀಟಿಗಳನ್ನು ಪಡಿದುಕೊಳ್ಳಲು ಸಾಧ್ಯ- ವಾಗುತ್ತಿಲ್ಲ’ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.

Contact Your\'s Advertisement; 9902492681

‘ಜೂನ್ ತಿಂಗಳಿನಿಂದ ಅರ್ಜಿ ಸಲ್ಲಿಕೆಗೆ ಪ್ರತಿದಿನ ಕೆಲ ಗಂಟೆಗಳ ಕಾಲ ಅವಕಾಶ ಮಾಡಿಕೊಟ್ಟಿದೆ. ಆದರೆ ಸರ್ವರ್ ಸಮಸ್ಯೆಯಿಂದ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಲು ಬಡವರು ಪರದಾಡುವಂತಹ ಸ್ಥಿತಿ ಎದುರಾಗಿದೆ.

ಜನರು ಅರ್ಜಿಗಳನ್ನು ಸಲ್ಲಿಸಬೇಕಾದರೆ ಬೆಳಿಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಲ್ಲ- ಬೇಕಾಗುತ್ತದೆ. ಆನ್‍ಲೈನ್ ಸೆಂಟರ್‍ಗಳ ಮುಂದೆ ಮಧ್ಯರಾತ್ರಿಯಿಂದಲೇ ಸಾಲು-ಸಾಲಾಗಿ ಗಂಟೆಗಟ್ಟಲೇ ನಿಂತರು ಸಹ ಸರ್ವರ್ ಬರುತ್ತಿಲ್ಲ’ ಎಂದು ಹೇಳಿದರು.

‘ಇನ್ನೂ 2.95 ಲಕ್ಷ ಹೊಸ ಪಡಿತರ ಚೀಟಿಗಳನ್ನು ಸರ್ಕಾರ ವಿತರಣೆ ಮಾಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ಇದರಿಂದ ಪ್ರಧಾನ ಮಂತ್ರಿ ಆಯುಷ್ಮಾನ್ ಯೋಜನೆಯಡಿ ಬಡವರು ಸಹಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಕಳೆದ 6 ತಿಂಗಳಿಂದ ಪಡಿತರ ಪಡೆಯದ 3.26 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆ ಹೇಳಿದೆ. ಕೊಳಗೇರಿಗಳಲ್ಲಿ ವಾಸವಾಗಿರುವ ಬಡ ಹಾಗೂ ಮಧ್ಯಮ ವರ್ಗಗಳ ಕುಟುಂಬಗಳಿಗೆ ಜೀವನಾಧಾ- ರವಾಗಿದ್ದ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಇದರಿಂದ ಲಕ್ಷಾಂತರ ನೈಜ ಬಡ ಕುಟುಂಬಗಳು ಉಪವಾಸ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

ಸಂಘಟನೆಯ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ, ಗೌರಮ್ಮ ಮಾಕಾ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here