ಸುರಪುರ: ಕನ್ನಡ ನಾಡು ಇಂದು ಇಷ್ಟೊಂದು ಸಮೃದ್ಧವಾಗಿದೆ,ಅಭಿವೃಧ್ಧಿಯಾಗಿದೆ ಎಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿದರು.
ನಗರದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕ ಆಡಳಿತ ದಿಂದ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಅರಸು ಅವರು ಮುಖ್ಯವiಂತ್ರಿಯಾಗಿ ನಾಡಿನಲ್ಲಿಯ ದೀನ,ದಲಿತ,ಶೋಷಿತರ ಮುಖ್ಯವಾಗಿ ಹಿಂದುಳಿದವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದರು.
ಆದ್ದರಿಂದಲೇ 1969 ರಿಂದ 79ರವರೆಗಿನ ಕಾಲಘಟ್ಟವನ್ನು ಅರಸು ಯುಗವೆಂದು ಕರೆಯಲಾಗುತ್ತದೆ ಎಂದರು.ಅಲ್ಲದೆ ವೈಚಾರಿಕ ಚಿಂತಕರಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಅವರು ಆಧುನಿಕ ಯುಗದ ಆಧ್ಯಾತ್ಮ ಜೀವಿಯಾಗಿದ್ದರು ಎಂದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಮಾಲಿ ಪಾಟೀಲ್ ಮಾತನಾಡಿ,ನಾಡಿನಲ್ಲಿಯ ಹಿಂದುಳಿದ,ದೀನ,ದಲಿತ,ಶೋಷಿತ ಸಮುದಾಯಗಳ ಧ್ವನಿಯಾಗಿ ದೇವರಾಜ ಅರಸು ಅವರು ಕೆಲಸ ಮಾಡಿದ್ದಾರೆ.ಮೈಸೂರ ಕರ್ನಾಟಕ ಎಂದು ಕರೆಯುತ್ತಿದ್ದ ಅವರ ಆಡಳಿತದ ಸಂದರ್ಭದಲ್ಲಿ ಕರ್ನಾಟಕ ಸರಕಾರ ಎಂದು ನಾಮಕರಣ ಮಾಡಿದ ಧೀಮಂತ ನಾಯಕ ಡಿ.ದೇವರಾಜ ಅರಸು ಆಗಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಗ್ರೇಡ-2 ತಹಸಿಲ್ದಾರ್ ಮಲ್ಲಯ್ಯ ದಂಡು ಹಾಗೂ ಉಪನ್ಯಾಸಕರಾಗಿ ಭಾಗವಹಿಸಿದ್ದ ಉಪ ಖಜಾನೆ ಪತ್ರಾಂಕಿತ ಅಧಿಕಾರಿ ಸಣ್ಣಕೆಪ್ಪ ಕೊಂಡಿಕಾರ್ ಮಾತನಾಡಿದರು.ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿದ್ದು ವಿದ್ಯಾಭ್ಯಾಸ ಮಾಡಿ ಎಸ್.ಎಸ್.ಎಲ್.ಸಿ,ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿನಿಲಯದಲ್ಲಿನ ವಿದ್ಯಾರ್ಥಿಗಳಿಗಾಗಿ ನಡೆಸಲಾದ ಪ್ರಬಂಧ,ಭಾಷಣ,ಕ್ರೀಡಾ ಸ್ಪರ್ಧೆಯಲ್ಲಿ ವಿಜೆತ ವಿದ್ಯಾರ್ಥಿಗಳಿಗೆ ಹಾಗೂ ವಸತಿ ನಿಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರಾದ ಮಲ್ಲಣ್ಣ ಸಾಹುಕಾರ ನರಸಿಂಗಪೇಟ,ಪಿ.ಐ ಆನಂದ ವಾಗಮೊಡೆ,ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ಮುಖ್ಯ ಅತಿಥಿಗಳಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಹ್ಮದ್ ಸಲೀಂ,ಇಂಜಿನಿಯರಿಂಗ್ ಬಾಲಕಿಯ ವಸತಿ ನಿಲಯದ ಪಾಲಕರಾದ ಶಾಂತಾಬಾಯಿ, ವಸತಿ ನಿಲಯದ ಮೇಲ್ವಿಚಾರಕರಾದ ಯಂಕಪ್ಪ ಟಣಕೇದಾರ,ಮಲ್ಲಿಕಾರ್ಜುನ,ನಾಗಪ್ಪ,ಬಸವರಾಜ,ವಿರೇಶ ಸಾಹುಕಾರ, ವೆಂಕಟೇಶ,ನೀಲಮ್ಮ,ರೂಪವತಿ,ಮಹಾದೇವಿ,ಅನಾರಕಲಿ,ಶೀಲಾ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…