ಬಿಸಿ ಬಿಸಿ ಸುದ್ದಿ

ಸಾಧನೆ ಮಾಡಲು ಓದಿನಷ್ಟೆ ಕ್ರೀಡೆಯಲ್ಲೂ ಅವಕಾಶವಿದೆ

ಸುರಪುರ:ಯಾವುದೇ ವ್ಯಕ್ತಿ ಸಾಧನೆ ಮಾಡಲು ಕೇವಲ ಓದು ಒಂದೇ ಮುಖ್ಯವಲ್ಲ,ಇಂದು ಓದಿನಷ್ಟೆ ಕ್ರೀಡೆಯಲ್ಲೂ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಮಾತನಾಡಿದರು.

ನಗರದ ತಾಲೂಕ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸುರಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,ಕ್ರೀಡೆಯಲ್ಲಿ ಸಾಧನೆ ಮಾಡಿದವರನ್ನು ಜಗತ್ತೆ ಗುರುತಿಸುತ್ತದೆ,ಅಲ್ಲದೆ ಕ್ರೀಡೆಯಿಂದ ದೈಹಿಕ,ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಕ್ರೀಡೆ ತುಂಬಾ ಅವಶ್ಯಕವಾಗಿದೆ ಎಂದರು.

ಕ್ರೀಡಾಕೂಟ ಉದ್ಘಾಟಿಸಿದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಂಶುಪಾಲ ಆನಂದಕುಮಾರ ಜೋಶಿ ಮಾತನಾಡಿ,ವಿದ್ಯಾರ್ಥಿಗಳಿಗೆ ಕ್ರೀಡೆಯೆನ್ನುವುದು ತುಂಬಾ ಅಗತ್ಯವಾಗಿದೆ,ಇದರಿಂದ ಮಾನಸಿಕ ಬೌಧ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು,ಇಂದು ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟು ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಮೆರೆಯಬೇಕು,ಯಾವುದೇ ವಿವಾದಗಳಿಗೆ ಆಸ್ಪದ ನೀಡದೆ ಕ್ರೀಡಾಕೂಟ ಯಶಸ್ವಿಗೊಳಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಪ್ರಾಂಶುಪಾಲ ಶ್ರೀಕಾಂತ ಜಿ.ಕೆ,ಕ್ಷೇತ್ರ ಸಮನ್ವಯಾಧಿಕಾರಿ ಪಂಡೀತ ನಿಂಬೂರ,ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಮಲ್ಲಣ್ಣ ದೊಡ್ಮನಿ,ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಪ್ಪ ದರಬಾರಿ,ಎಎಸ್‍ಐ ಮನೋಹರ ರಾಠೋಡ,ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಖಾದರ್ ಪಟೇಲ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದಪ್ಪ ಟಣಕೆದಾರ,ಸಿಆರ್‍ಪಿ ಪ್ರಶಾಂತ,ಶಿವಕುಮಾರ ಕಮತಗಿ,ಶಿವಕುಮಾರ ಹಿರೇಮಠ,ಮಲ್ಲಿಕಾರ್ಜುನ ದೊಡ್ಮನಿ, ಇಸಿಓ ಶರಣಯ್ಯ,ಉಪನ್ಯಾಸಕ ರಾಮಣಗೌಡ ಸುಬೇದಾರ ಇದ್ದರು.ದೈಹಿಕ ಶಿಕ್ಷಕ ಲಕ್ಷ್ಮಣ ಬಿರಾದಾರ ನಿರೂಪಿಸಿದರು.ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶರಣಗೌಡ ಮಾಲಿ ಪಾಟೀಲ್ ಸ್ವಾಗತಿಸಿದರು,ಕ್ರೀಡಾಕೂಟ ಪ್ರತಿಜ್ಞೆಯನ್ನು ಭೀಮರಾಯ ಗೋನಾಲ ಬೋಧಿಸಿದರು ಹಾಗೂ ದೈಹಿಕ ಶಿಕ್ಷಕ ಸುಭಾಷ್ ಅಗ್ನಿ ವಂದಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದೈಹಿಕ ಶಿಕ್ಷಕರು ಸರಕಾರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ಸರಕಾರಕ್ಕೆ ಒತ್ತಾಯಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago