ಕಲಬುರಗಿ: ನಾಡಹಬ್ಬ ವಿಜಯದಶಮಿಯನ್ನು ಶೃದ್ಧಾ ಭಕ್ತಿಯಿಂದ ಜಿಲ್ಲೆಯ ಜನತೆ ಆಚರಿಸುತ್ತಿದ್ದು, ಅಕ್ಟೋಬರ್ ೮ರಂದು ಜರುಗಲಿರುವ ಪ್ರಧಾನ ಕಾರ್ಯಕ್ರಮಕ್ಕಾಗಿ ಸಾರ್ವಜನಿಕರು ಅಗತ್ಯ ಪೂಜಾ ಸಾಮಗ್ರಿಗಳನ್ನು ಮಾರುಕಟ್ಟೆಯಲ್ಲಿ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದರು.
ಭಾನುವಾರ ಸರ್ಕಾರಿ ರಜೆ ಇದ್ದುದರಿಂದ ಬಹುತೇಕ ಸರ್ಕಾರಿ ನೌಕರರು, ಅಧಿಕಾರಿಗಳು ಮಾರುಕಟ್ಟೆಗೆ ತೆರಳಿ ತಮಗೆ ಬೇಕಾದ ಸಾಮಗ್ರಿಗಳನ್ನು ಪಡೆದುಕೊಂಡರು. ನಗರದ ಸೂಪರ್ ಮಾರ್ಕೆಟ್‌ನಲ್ಲಿ ಖರೀದಿದಾರರ ದಂಡೇ ಸೇರಿತ್ತು. ಜನಜಂಗುಳಿಯಲ್ಲಿ ಸೇರಿ ವರ್ತಕರಿಂದ ಕಬ್ಬು, ಬಾಳೆ, ಹಣ್ಣು, ತರಕಾರಿ, ಹೂವು ಮುಂತಾದವುಗಳನ್ನು ಖರೀದಿಸಿದರು.
ಈಗಾಗಲೇ ನವರಾತ್ರಿ ಉತ್ಸವವನ್ನು ನಿತ್ಯವು ಒಂದಿಲ್ಲೊಂದು ವಿಶೇಷತೆಯ ಮೂಲಕ ಆಚರಿಸಲಾಗುತ್ತಿದೆ. ಪ್ರತಿ ದೇವಸ್ಥಾನ ಹಾಗೂ ಮನೆ, ಮನೆಗಳಲ್ಲಿ ನಾಡದೇವಿಯನ್ನು ವಿವಿಧ ರೀತಿಯಲ್ಲಿ ಸಿಂಗರಿಸಿ ಪೂಜೆ ಪುನಸ್ಕಾರಗಳ ಮೂಲಕ ಶೃದ್ಧಾಭಕ್ತಿಯನ್ನು ಮೆರೆಯುತ್ತಿದ್ದಾರೆ. ಹಲವಾರು ದೇವಸ್ಥಾನಗಳಲ್ಲಿಯೂ ಸಹ ಭಕ್ತರು ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಪುರಾಣ ಪ್ರವಚನಗಳೂ ಸಹ ಅಲ್ಲಲ್ಲಿ ನಡೆಯುತ್ತಿವೆ. ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮನರಂಜನಾ ಕಾರ್ಯಕ್ರಮಗಳೂ ಸಹ ಜರುಗುತ್ತಿವೆ.
ಎಲ್ಲಿ ನೋಡಿದರಲ್ಲಿ ವಿಜಯದಶಮಿಯ ಸಡಗರ, ಸಂಭ್ರಮ ಎದ್ದು ಕಾಣುತ್ತಿದೆ. ವಿಜಯದಶಮಿಯ ನಿಮಿತ್ಯ ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಆಕರ್ಷಕ ಪಥ ಸಂಚಲನ ನಡೆಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…