ಬಿಸಿ ಬಿಸಿ ಸುದ್ದಿ

1,558 ಜನರಿಗೆ ಸರ್ಕಾರಿ ಸೌಲಭ್ಯ ವಿತರಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಇಲ್ಲಿನ ಪಿ.ಡಿ.ಎ. ಇಂಜಿನೀಯರಿಂಗ್ ಕಾಲೇಜಿನ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮದ ಉದ್ಘಾಟನೆ ಸಮಾರಂಭವು 1,558 ಜನರಿಗೆ ಸರ್ಕಾರದ ವಿವಿಧ ಇಲಾಖೆಯ ಸೌಲಭ್ಯ ವಿತರಣೆಗೂ ಸಾಕ್ಷಿಯಾಯಿತು.

ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ ಮತ್ತು ಶಾಸಕ-ಸಂಸದರೊಂದಿಗೆ ವಿವಿಧ ಇಲಾಖೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೇರವಾಗಿ ವಿತರಣೆ ಮಾಡಿ ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.

ಸಂಜೀವಿನಿ ಎನ್.ಆರ್.ಎಲ್.ಎಂ.-ಸ್ವಚ್ಛ ಭಾರತ ಅಭಿಯಾನದ ಒಗ್ಗೂಡಿಸುವಿಕೆ ಕಾರ್ಯಕ್ರಮದಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಸ ಸಂಗ್ರಹಣೆಗೆ ಲಘು ಮೋಟಾರು ವಾಹನ ಚಾಲನಾ ತರಬೇತಿ ಪಡೆದ 203 ಜನ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ವಿತರಣೆ ಮಾಡಲಾಯಿತು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಬಹುದಾದ ಕಾಮಗಾರಿಗಳನ್ನು ಗುರುತಿಸಲು ತಾಂತ್ರಿಕ ಸಹಾಯಕರಿಗೆ ಸಹಾಯ ಮಾಡಲು ಮತ್ತು ಉದ್ಯೋಗದ ಬೇಡಿಕೆ ಪಡೆದು ಗ್ರಾಮ ಪಂಚಾಯತಿಗೆ ಸಲ್ಲಿಸುವ 11 ಜನ ನೂತನ ಬೇರ್ ಫೂಟ್ ಟೆಕ್ನಿಶಿಯನ್‌ಗಳಿಗೆ ಮತ್ತು ನರೇಗಾ ಯೋಜನೆ ಕುರಿತು ಮನೆ-ಮನೆಗೆ ತೆರಳಿ ಅರಿವು ಮೂಡಿಸುವ 49 ನೂತನ ಗ್ರಾಮ ಕಾಯಕ ಮಿತ್ರರಿಗೆ ನೇಮಕಾತಿ ಪತ್ರ ನೀಡಲಾಯಿತು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಯಂತ್ರಚಾಲಿತ ದ್ವಿ-ಚಕ್ರ ವಾಹನ ಯೋಜನೆಯಡಿ ಶೇ.75 ಕ್ಕಿಂತ ಹೆಚ್ಚಿರುವ 180 ದೈಹಿಕ ವಿಕಲಚೇತನ ಫಲಾನುಭವಿಗಳಿಗೆ 180 ಲಕ್ಷ ರೂ. ವೆಚ್ಚದಡಿ ಯಂತ್ರಚಾಲಿತ ದ್ವಿ-ಚಕ್ರ ವಾಹನ, ಬ್ಯಾಟರಿ ಚಾಲಿತ ವೀಲ್ ಚೇರ್ ಯೋಜನೆಯಡಿ ಶೇ.75 ಕ್ಕಿಂತ ಹೆಚ್ಚಿರುವ 18 ದೈಹಿಕ ವಿಕಲಚೇತನರಿಗೆ 17.28 ಲಕ್ಷ ರೂ. ವೆಚ್ಚದಡಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಎಸ್.ಎಸ್.ಎಲ್.ಸಿ ಹಾಗೂ ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ 12 ಅಂಧ ವಿಕಲಚೇತನ ವಿದ್ಯಾರ್ಥಿಗಳಿಗೆ 16.43 ಲಕ್ಷ ರೂ. ವೆಚ್ಚದಲ್ಲಿ ಟಾಕಿಂಗ್ ಲ್ಯಾಪ್ಟಾಪ್, ಬ್ರೆಲ್‌ಕಿಟ್ ಯೋಜನೆಯಡಿ 9 ಅಂಧ ವಿಕಲಚೇತನ ವಿದ್ಯಾರ್ಥಿಗಳಿಗೆ 2.25 ಲಕ್ಷ ರೂ. ಗಳ ವೆಚ್ಚದಲ್ಲಿ ಬ್ರೆಲ್ ಕಿಟ್ ಹಾಗೂ ಶ್ರವಣದೋಶವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿಗಳಾಗಲು 1.70 ಲಕ್ಷ ರೂ. ಗಳಲ್ಲಿ ಒಟ್ಟು 17 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದಲ್ಲದೆ ಕಿಯೋನಿಕ್ಸ್ ಸಂಸ್ಥೆಯಿಂದ ಸಿ.ಎಸ್.ಆರ್ ನಿಧಿಯಡಿ 11.50 ಲಕ್ಷ ರೂ. ಗಳಲ್ಲಿ ವಿಶೇಷ ಶಾಲೆಗಳಿಗೆ 2 ಶಾಲಾ ವಾಹನ ಹಂಚಿಕೆ ಮಾಡಿ ಕೀ ವಿತರಿಸಲಾಯಿತು.

ದಿ.ದೇವರಾಜ ಅರಸು ಅವರ ಜನ್ಮ ದಿನದ ಪ್ರಯುಕ್ತ ಕಲಬುರಗಿ ಮಹಾನಗರ ಪಾಲಿಕೆಯಿಂದ 598 ಜನ ಮಹಿಳಾ ಪೌರ ಕಾರ್ಮಿಕರಿಗೆ ತಲಾ ಎರಡರಂತೆ 1,196 ಸೀರೆಗಳು ಹಾಗೂ 461 ಪುರುಷ ಪೌರ ಕಾರ್ಮಿಕರಿಗೆ ತಲಾ ಒಂದು ಜೊತೆ ಪಾದರಕ್ಷೆಗಳನ್ನು ವಿತರಣೆ ಮಾಡಲಾಯಿತು. ಇದಲ್ಲದೆ 1,059 ಮಹಿಳಾ ಮತ್ತು ಪುರುಷ ಪೌರಕಾರ್ಮಿಕರಿಗೆ ತಲಾ 2 ಮಾಸ್ಟ್ಗಳಂತೆ 2,118 ಮಾಸ್ಕ್ಗಳನ್ನು ಮತ್ತು ತಲಾ 4 ಕೈಗವಚಗಳಂತೆ 4,236 ಕೈಗವಚಗಳನ್ನು ಗಣ್ಯರು ವಿತರಣೆ ಮಾಡಿದರು.

ಮುಖ್ಯಮಂತ್ರಿಗಳ ಸಲಹೆಗಾರರು ಮತ್ತು ಆಳಂದ ಶಾಸಕ ಬಿ.ಆರ್.ಪಾಟೀಲ, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷರು ಮತ್ತು ಅಫಜಲಪೂರ ಶಾಸಕ ಎಂ.ವೈ.ಪಾಟೀಲ, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಸಂಸದ ರಾಧಾಕೃಷ್ಣ ದೊಡ್ಡಮನಿ, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಎ.ವಸಂತಕುಮಾರ, ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ (ಪಂ.ರಾಜ್) ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್, ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ (ಪಂ.ರಾಜ್) ಡಾ.ಆರುಂಧತಿ ಚಂದ್ರಶೇಖರ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ ಪಾಟೀಲ ದೇವಿದಾಸ್, ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ, ಅಂಗವಿಕಲ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಾದೀಕ್ ಹುಸೇನ್ ಖಾನ್ ಸೇರಿದಂತೆ ಅನೇಕರು ಇದಕ್ಕೆ ಸಾಕ್ಷಿಯಾದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

9 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

9 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

11 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

11 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

11 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

11 hours ago