ಕಲಬುರಗಿ: ಐ.ಟಿ. ಮತ್ತು ದೂರಸಂಪರ್ಕ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರಿಂದ ಕ್ರಾಂತಿಕಾರಿ ನೀತಿ ಜಾರಿ ಪರಿಣಾಮ ದೇಶದಲ್ಲಿ ಇಂದು ಅಂಗೈಯಲ್ಲಿ ಆಡಳಿತ ನೋಡಲು ಸಾಧ್ಯವಾಗುತ್ತಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕಲಬುರಗಿ ನಗರದ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನೀಯರಿಂಗ್ ಕಾಲೇಜಿನ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮದ ಉದ್ಘಾಟನೆ ಹಾಗೂ ಯೋಜನೆಯ ಲೋಗೋ ಅನಾವರಣಗೊಳಿಸಿ ಅವರು ಮಾತನಾಡಿದರು.
ಯುವ ಸಮೂಹದ ಮೇಲೆ ಅಪಾರ ನಂಬಿಕೆ ಹೊಂದಿದ್ದ ರಾಜೀವ ಗಾಂಧಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವಕರ ಪಾಲ್ಗೊಳ್ಳುವಿಕೆಯ ಹೆಚ್ಚಿಸುವ ನಿಟ್ಟಿನಲ್ಲಿ ಶ್ರಮಿಸಿದ್ದವರಾಗಿದ್ದಾರೆ.. ದೇಶದಲ್ಲಿ 21 ವರ್ಷ ಮೀರಿದಲ್ಲಿ ಮತದಾನದ ಹಕ್ಕು ಇತ್ತು, ಇದನ್ನು 18ಕ್ಕೆ ಇಳಿಸಿದ್ದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದ ಅವರು ಗ್ರಾಮೀಣ ಜನರ ಬದುಕು ಹಸನಾಗಬೇಕು. ಹಳ್ಳಿಯಿಂದ ದಿಲ್ಲಿ ವರೆಗೆ ನಾಯಕರನ್ನು ಬೆಳೆಸಬೇಕೆಂದು ಮತ್ತು ಅಧಿಕಾರ ವಿಕೇಂದ್ರಿಕರಣವಾಗಬೇಕೆಂದು 1992ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಪಂಚಾಯತ್ ರಾಜ್ಯ ವ್ಯವಸ್ಥೆ ಬಲಗೊಳಿಸಿದರು ಎಂದರು.
ನಾನು ಜಿಲ್ಲಾ ಪಂಚಾಯತಿಯಿಂದಲೆ ರಾಜಕೀಯಕ್ಕೆ ಬಂದವನು. ಇಲ್ಲಿ ವೇದಿಕೆ ಮೇಲಿರುವ ಅನೇಕರು ಪಂಚಾಯತ್ ರಾಜ್ ವ್ಯವಸ್ಥೆಯಿಂದ ಬಂದವರಾಗಿದ್ದಾರೆ. ಹೀಗಾಗಿ ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಳ್ಳಬೇಕೆಂಬ ನಿಟ್ಟಿನಲ್ಲಿ ಇಂದಿಲ್ಲಿ ರಾಜೀವ ಗಾಂಧಿ ಫೆಲೋಶಿಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಇದಕ್ಕೆ ಆಯ್ಕೆಯಾದ ಯುವಕ-ಯುವತಿಯರು ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ನಿಟ್ಟಿನಲ್ಲಿ ಉತ್ತಮ ಯೋಜನೆ, ನೀತಿ ತರಲು ಸರ್ಕಾರಕ್ಕೆ ನೆರವಾಗಬೇಕೆಂದರು.
ರಾಜ್ಯದಲ್ಲಿ ಜನರ ಜೀವನಮಟ್ಟ ಸುಧಾರಣೆ ಮತ್ತು ಅವರ ಬದುಕು ಕಟ್ಟಿಕೊಳ್ಳಲು ನೆರವಾಗುವಂತಹ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಮ್ಮದು ಬಡವರ ಪರ ಸರ್ಕಾರ, ಹಸಿದವರ ಹೊಟ್ಟೆ ತುಂಬಿಸುವ ಸರ್ಕಾರ ಎಂದರು.
ಜನಮಾನಸದಲ್ಲಿ ಖರ್ಗೆ: ಡಿ.ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ, ಭೂ ಸುಧಾರಣೆದಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಹಿಂದುಳಿದ, ಶೋಷಿತ ಸಮುದಾಯ ಶ್ರೇಯೋಭಿವೃದ್ಧಿಗೆ ದುಡಿದ ಮಹಾನ್ ನಾಯಕರಾಗಿದ್ದಾರೆ. ಅರಸು ಅವರ ಸಂಪುಟದಲ್ಲಿ ಸಚಿವರಾಗಿ ಅವರ ಆದರ್ಶವನ್ನು ಬೆಳೆಸಿಕೊಂಡಿರುವ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಮತ್ತು ವಿಶೇಷ ಅನುದಾನ ಕಲ್ಪಿಸುವ 371ಜೆ ಕಾಯ್ದೆ ಜಾರಿಗೆ ತರುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಜನಮಾನಸದ ಹೃದಯದಲ್ಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ಈ ಭಾಗದ ನಾಯಕರಲ್ಲ. ಅವರು ರಾಷ್ಟ್ರದ ನಾಯಕರಾಗಿದ್ದಾರೆ. ರಾಷ್ಟ್ರಕ್ಕೆ ಇಂತಹ ಮಹಾ ನಾಯಕನನ್ನು ನೀಡಿದ ಕಲಬುರಗಿ ಮಹಾ ಜನತೆಗೆ ಧನ್ಯವಾದ ಅರ್ಪಿಸುವೆ ಎಂದರು.
ಅರಸು ಹಾದಿಯಲ್ಲಿ ನಮ್ಮ ಸರ್ಕಾರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ ದುರ್ಬಲ ವರ್ಗಕ್ಕೆ ಅಧಿಕಾರ ನೀಡಿದ ಕೀರ್ತಿ ಡಿ.ದೇವರಾಜ ಅರಸು ಮತು ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರಿಗೆ ಸಲ್ಲುತ್ತದೆ ಎಂದ ಅವರು, ಅರಸು ಅವರ ಹಾದಿಯಲ್ಲಿ ನಮ್ಮ ಸರ್ಕಾರ ಸಾಗುತ್ತಿದೆ ಎಂದರು.
ದಿ.ರಾಜೀವ ಗಾಂಧಿ ಅವರು 1992ರಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಸಾಂವಿಧಾನಿಕ ಸ್ಥಾನಮಾನ ನೀಡಿ ಮಹಿಳೆಯರಿಗೆ ಅಧಿಕಾರ ನೀಡಿ ವಿಕೇಂದ್ರಿಕರಣ ವ್ಯವಸ್ಥೆ ಜಾರಿಗೆ ತಂದರು. ಐ.ಟಿ-ಬಿ.ಟಿ. ಕ್ಷೇತ್ರದಲ್ಲಿ ಕ್ರಾಂತಿಕಾರಿ ಯೋಜನೆ ಜಾರಿಗೆ ತಂದ ಪರಿಣಾಮ ಕರ್ನಾಟಕ ಇಂದು ವಿಶ್ವದಲ್ಲಿಯೇ 4ನೇ ಅತಿದೊಡ್ಡ 4 ಲಕ್ಷ ಕೋಟಿ ರೂ. ಐ.ಟಿ. ರಫ್ತು ಮಾಡುವಲ್ಲಿ ಗುರುತಿಸಿಕೊಂಡಿದೆ ಎಂದರು.
ಪಂಚಾಯತ್ ರಾಜ್ ವ್ಯವಸ್ಥೆ ಜಾರಿ ಪರಿಣಾಮ ಇದೀಗ ಗ್ರಾಮಾಭಿವೃದ್ಧಿಗೆ ಹಳ್ಳಿಯಲ್ಲಿಯೇ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಅನುದಾನ ಹಂಚಿಕೆ ಆಯಾ ಗ್ರಾಮದ ಅಧ್ಯಕ್ಷರೆ ಮಾಡುತ್ತಾರೆ ಎಂದ ಅವರು ಇಂದಿಲ್ಲಿ ರಾಜ್ಯದಲ್ಲಿ ಮೊದಲನೇ ಹಂತವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಫೆಲೋಶಿಪ್ ಪಡೆದ 44 ಯುವಕ-ಯುವತಿಯರು ಹಳ್ಳಿ-ಹಳ್ಳಿ ಸುತ್ತಾಡಿ ಗ್ರಾಮೀಣ ಜನರ ಬದುಕು ಸಮೃದ್ಧಿಯನ್ನಾಗಿಸಲು ಮತ್ತು ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಉತ್ತಮ ಆಡಳಿತ ನೀಡಲು ನೆರವಾಗಬೇಕು ಎಂದರು.
ಮಹಿಳೆಗೆ ಅಧಿಕಾರ,ರಾಜೀವ ಗಾಂಧಿ ಸಂಕಲ್ಪ:ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರು ಐ.ಟಿ. ವಲಯಕ್ಕೆ ಪ್ರೋತ್ಸಾಹ, ಮೂರು ಹಂತದ ಪಂಚಾಯತ್ ರಾಜ್ಯ ವ್ಯವಸ್ಥೆ ಸ್ಥಾಪನೆ ಹಾಗೂ ರಾಜಕೀಯ ಸ್ಥಿರತೆಗೆ ಎಂಟಿ ಡಿಫೆಕ್ಷನ್ ಲಾ ಜಾರಿಗೆ ತಂದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದ ಮಹಿಳೆಯರಿಗೆ ಅಧಿಕಾರ ನೀಡುವುದೇ ಅವರ ಸಂಕಲ್ಪವಾಗಿತ್ತು ಎಂದರು.
ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ (ಪಂ.ರಾಜ್) ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಯೋಜನೆ ಉದ್ದೇಶ ವಿವರಿಸಿದರು.
ಫಲಾನುಭವಿಗಳಿಗೆ ಸೌಲಭ್ಯ ವಿತರಣೆ: ಕಾರ್ಯಕ್ರಮದಲ್ಲಿ 44 ಜನರಿಗೆ ರಾಜೀವ ಗಾಂಧಿ ಫೆಲೋಶಿಪ್ ಆಯ್ಕೆ ಪತ್ರ ವಿತರಣೆ ಜೊತೆಗೆ ಸಾಂಕೇತಿಕವಾಗಿ ಆರ್.ಡಿ.ಪಿ.ಆರ್ ಇಲಾಖೆಯಿಂದ ಸಂಜೀವಿನಿ ಎನ್.ಆರ್.ಎಲ್.ಎಂ.-ಸ್ವಚ್ಛ ಭಾರತ ಅಭಿಯಾನದಡಿ ಕಸ ಸಂಗ್ರಹಣೆಗೆ ಲಘು ಮೋಟಾರು ವಾಹನ ಚಾಲನಾ ತರಬೇತಿ ಪಡೆದ ಮಹಿಳೆಯರಿಗೆ ಚಾಲನಾ ಲೈಸೆನ್ಸ್, ಪೌರ ಕಾರ್ಮಿಕರಿಗೆ ಸೀರೆ ಮತ್ತು ಸುರಕ್ಷಾ ಕವಚಗಳು ಹಾಗೂ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.
ಏನಿದು ರಾಜೀವ ಗಾಂಧಿ ಫೆಲೋಶಿಪ್?: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸುವ ಗುರಿಯೊಂದಿಗೆ ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಗ್ರಾಮೀಣಾಭಿವೃದ್ಧಿ, ಸಮಾಜಕಾರ್ಯ ಮತ್ತು ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದವರನ್ನು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಯೋಜನೆಗೆ ಫೆಲೋಗಳೆಂದು ಆಯ್ಕೆ ಮಾಡಲಾಗಿದೆ. ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ನಿಭಾಯಿಸಲು, ಸ್ಥಳೀಯ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸ್ಥಳೀಯ ಆಡಳಿತದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ತರಬೇತಿ ಪಡೆದ ಈ ಫೆಲೋಗಳು ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸಿ ಉತ್ತಮ ಗ್ರಾಮ ಆಡಳಿತಕ್ಕೆ ನೀತಿ, ನಿರೂಪಣೆ ತರಲು ಫೀಡ್‌ಬ್ಯಾಕ್ ನೀಡಲಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆಯ್ಕೆಯಾದ ಈ ಫೆಲೋಗಳಿಗೆ ಮಾಸಿಕ 60,000 ರೂ. ಫೆಲೋಶಿಪ್ ನೀಡಿ ಪ್ರದೇಶದ ವಿವಿಧ ತಾಲ್ಲೂಕುಗಳಿಗೆ ನಿಯೋಜಿಸಲಾಗುತ್ತದೆ.
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಸಲಹೆಗಾರರು ಮತ್ತು ಆಳಂದ ಶಾಸಕ ಬಿ.ಆರ್.ಪಾಟೀಲ, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷರು ಮತ್ತು ಅಫಜಲಪೂರ ಶಾಸಕ ಎಂ.ವೈ.ಪಾಟೀಲ, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಸಂಸದ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಎ.ವಸಂತಕುಮಾರ, ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ (ಪಂ.ರಾಜ್) ಡಾ.ಆರುಂಧತಿ ಚಂದ್ರಶೇಖರ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತ ಭುನೇಶ ಪಾಟೀಲ ದೇವಿದಾಸ್ ಸೇರಿದಂತೆ ಕಲಬುರಗಿ ವಿಭಾಗದ 7 ಜಲ್ಲೆಗಳ ಜಿಲ್ಲಾ ಪಂಚಾಯತ್ ಸಿ.ಇ.ಓ.ಗಳು ಹಾಗೂ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕಲಬುರಗಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಸ್ವಾಗತಿಸಿದರೆ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ವಂದಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…