ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ಎಂದು ಸಿ.ಎ.ಇಂಗಿನಶೆಟ್ಟಿ ಕಾಲೇಜಿನ ಪ್ರಾಂಶುಪಾಲ ರಾಜಗೋಪಾಲ ಜೂಜಾರೆ ಹೇಳಿದರು.
ಅವರು ಮಂಗಳವಾರ ನಗರದ ಸಿ.ಎ.ಇಂಗಿನಶೆಟ್ಟಿ ಕಾಲೇಜಿನಲ್ಲಿ ಆಯೋಜಿಸಲಾದ ದೇವರಾಜ ಅರಸು ಹಾಗೂ ನಾರಾಯಣ ಗುರು ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗೇಣಿ ಶಾಸನ,ಎಲ್.ಜಿ.ಹಾವನೂರು ಆಯೋಗ ದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ. ಗೇಣಿ ಹೋರಾಟದ ಅನುμÁ್ಠನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರೆ ಈವರೆವಿಗೂ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ. ಆದರೆ ದೇವರಾಜ ಅರಸು ಅವರು ತಮ್ಮ ಕಟು ನಿರ್ಧಾರದಿಂದ ಮುಂದಿನ ಬದುಕಿನ ದೂರದೃಷ್ಠಿಯಿಂದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದರು. ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು.
ಉಪನ್ಯಾಸಕ ರಾಜಕುಮಾರ ಬಾಸೂತ್‍ಕರ್ ಮಾತನಾಡಿ, ದೇವರಾಜ ಅರಸರು ಕೃಷಿಕ ಕುಟುಂಬದಿಂದ ಬಂದು ಸಾಹಿತ್ಯ, ಶೈಕ್ಷಣಿಕ ಕ್ಷೇತ್ರಗಳ ಬಗ್ಗೆ ಅರಿತುಕೊಂಡು ರಾಜಕೀಯ ಮಟ್ಟದಲ್ಲೂ ಉನ್ನತ ಮಟ್ಟಕ್ಕೆ ಏರಿದರು. ಉಳುವನ ಸಂಕಷ್ಟವನ್ನು ಪರಿಹರಿಸಲು ಎಷ್ಟೇ ವಿರೋಧಗಳ ನಡುವೆಯೂ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವುದರ ಮೂಲಕ ಉಳುವನೇ ಭೂಮಿಯ ಒಡೆಯ ಆಗುವಂತಹ ಭೂ ಸುಧಾರಣೆ ಕಾನೂನನ್ನು ಜಾರಿಗೆ ತಂದು ಹಿಂದುಳಿದ ಹಾಗೂ ಶೋಷಿತ ಸಮುದಾಯದವರು ನೆಮ್ಮದಿಯ ಜೀವನ ನಡೆಸಲು ಅರಸರೇ ಕಾರಣಿಭೂತರು ಎಂದರು.
ಉಪನ್ಯಾಸಕರಾದ ರಮೇಶ ವಾಲಿ, ಸಾಬಣ್ಣ ಗುಡುಬಾ, ಪ್ರವೀಣ ರಾಜನ್, ಶರಣು ಹಲಕರ್ಟಿ, ಸೂಗಯ್ಯ ಘಂಟಿಮಠ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…