ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಕನಕಪ್ಪ ದಂಡಗುಲಕರ್ ಮಾತನಾಡಿ, ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಆದರೆ, ಅಲ್ಲಿ ವಾಸಿಸುವ ಹಿಂದೂಗಳನ್ನೇ ಕೇಂದ್ರೀಕೃತಮಾಡಿರುವ ಕಿಡಿಗೇಡಿಗಳು ಆಸ್ತಿ ದೋಚುವುದು ಸಿಕ್ಕಸಿಕ್ಕವರ ಮೇಲೆ ನಿರಂತರವಾಗಿ ದೌರ್ಜನ್ಯ, ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿ ಕಗ್ಗೊಲೆ ಮಾಡಿ ಮನೆಗಳಿಗೆ ನುಗ್ಗಿ ಪ್ರಾಣಹಾನಿ ಮಾಡುತ್ತಿರುವುದು ಖಂಡನೀಯ ಎಂದರು.
ಬಾಂಗ್ಲಾದೇಶದ ಬಹುತೇಕ ಗ್ರಾಮಗಳಲ್ಲಿ ಜನರು ಜೀವಭಯದ ನಡುವೆ ಬದುಕು ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಿನ ಪೆÇಲೀಸ್ ಮತ್ತು ಸೇನಾ ಪಡೆ ಕೂಡ ಅಸಹಾಯಕತೆ ವ್ಯಕ್ತಪಡಿಸುತ್ತಿದೆ. ಬಾಂಗ್ಲದೇಶವೇ ಕೈಕಟ್ಟಿ ಕುಳಿತರೆ ಅಲ್ಲಿನ ಹಿಂದೂಗಳನ್ನು ರಕ್ಷಣೆ ಮಾಡುವವರು ಯಾರು ಎಂದು ಪ್ರಶ್ನಿಸಿದರು.
ದೂರದ ಬಾಂಗ್ಲಾದ ಹಿಂದೂಗಳಿಗೆ ನೋವಾಗಿದೆ ಎಂಬ ತಾತ್ಸಾರ ಬೇಡ. ನಮ್ಮ ದೇಶದ ಹಿಂದೂಗಳೂ ಕೂಡ ಸುರಕ್ಷಿತವಾಗಿಲ್ಲ. ಕೇರಳ, ಪಶ್ಚಿಮ ಬಂಗಾಳ, ಕಾಶ್ಮೀರದಂತಹ ಅನೇಕ ರಾಜ್ಯಗಳಲ್ಲಿ ಹಿಂದೂಗಳ ಸ್ಥಿತಿ ಶೋಚನೀಯವಾಗಿದೆ. ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗಾಗಿ ನಮ್ಮ ದೇಶದ ರಾಷ್ಟ್ರಪತಿಗಳು ವಿಶ್ವಸಂಸ್ಥೆಯೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರ ರೂಪಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ವಿಶ್ವಹಿಂದೂ ಪರಿಷತ್ ಕಾರ್ಯದರ್ಶಿ ಶರಣು ವಸ್ತ್ರದ್,ನಿಂಗಣ್ಣ ಹುಳಗೋಳಕರ್, ಭೀಮರಾವ ಸಾಳುಂಕೆ,ಚಂದ್ರಕಾಂತ ಗೊಬ್ಬೂರಕರ್,ಶಿವಕುಮಾರ ತಳವಾರ, ಶ್ರೀನಿವಾಸ ನೇದಲಗಿ,ಸದಾನಂದ ಕುಂಬಾರ, ಯಲ್ಲಪ್ಪ ದಂಡಗುಲಕರ್, ಅನೀಲ ಹಿಬಾರೆ,ದುರ್ಗಪ್ಪ ಪವಾರ,ಅಶೋಕ ಜಿಂಗಾಡೆ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…