ಕಲಬುರಗಿ: ಹಿರಿಯ ದಲಿತ ಮುಖಂಡ ವಿಠ್ಠಲ ದೊಡ್ಡಮನಿ ಅವರ ಕುರಿತಾಗಿ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ, ಪತ್ರಕರ್ತ ಸುರೇಶ ಬಡಿಗೇರ ಸಂಪಾದಿಸಿದ ” ದಲಿತ ಲೋಕದ ದಳಪತಿ ” ಕೃತಿ ಬಿಡುಗಡೆ ಕಾರ್ಯಕ್ರಮ ಇದೇ ಅಕ್ಟೋಬರ್ 12ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ದಿನೇಶ ದೊಡ್ಡಮನಿ, ಹಣಮಂತ ಇಟಗಿ ತಿಳಿಸಿದ್ದಾರೆ.
ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ. ಶರಣಬವಸಪಪ್ಪ ಅಪ್ಪ ಕೃತಿ ಲೋಕಾರ್ಪಣೆ ಮಾಡಲಿದ್ದು, ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯಸ್ವಾಮಿ ಉದ್ಘಾಟಿಸಲಿದ್ದಾರೆ. ಲೋಕಸಭೆಯ ಮಾಜಿ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮಾಜಿ ಸಂಸದ ಡಾ.ಬಿ.ಜಿ. ಜವಳಿ, ಮಾಜಿ ಶಾಸಕ ಬಿ.ಆರ್. ಪಾಟೀಲ, ಶಾಸಕ ಶರಣಬಸವಪ್ಪ ದರ್ಶನಾಪುರ, ಹಿರಿಯ ಚಿಂತಕ ತಾತ್ಯಾರಾವ ಕಾಂಬಳೆ, ವಿಶ್ರಾಂತ ನ್ಯಾಯಾಧೀಶರಾದ ಜಿ.ಕೆ. ಗೋಕಲೆ, ಸಿ.ಆರ್. ಬೆನಕನಳ್ಳಿ, ಹೈಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.
ಶಾಸಕರಾದ ಪ್ರಿಯಾಂಕ ಖರ್ಗೆ, ದತ್ತಾತ್ರೇಯ ಪಾಟೀಲ ರೇವೂರ, ಖನೀಜ್ ಫಾತಿಮಾ, ಬಸವರಾಜ ಮತ್ತಿಮೂಡ, ಡಾ. ಅಜಯಸಿಂಗ್, ಎಂ.ವೈಪಾಟೀಲ, ಡಾ. ಅವಿನಾಶ್ ಜಾಧವ, ರಾಜಜುಮಾರ ಪಾಟೀಲ ತೆಲ್ಕೂರ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಶರಣಪ್ಪ ಮಟ್ಟೂರ, ಮಾಜಿ ಸಚಿವ ಶರಣಪ್ರಕಾಶ ಪಾಟೀಲ, ಮಾಜಿ ಶಾಸಕರಾದ ಶಶೀಲ್ ನಮೋಶಿ, ಅಲ್ಲಮಪ್ರಭು ಪಾಟೀಲ, ವಿಶ್ವನಾಥ ಪಾಟೀಲ ಹೆಬ್ಬಾಳ, ಶಾಸಕರಾದ ಸುಭಾಷ ಗುತ್ತೇದಾರ, ಚಂದ್ರಶೇಖರ ಪಾಟೀಲ, ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಇತರರು ಆಗಮಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಬುದ್ಧ ವಿಹಾರದ , ಸಂಘಾನಂದ ಭಂತೇಜಿ, ಬೈಲೂರು ನಿಷ್ಕಲಮಂಟಪದ, ನಿಜಗುಣಾನಂದ ಸ್ವಾಮೀಜಿ, ಶ್ರೀಶೈಲಂ- ಸುಲಫಲ ಮಠದ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಹೇಳಿದ್ದಾರೆ.