ಬಿಸಿ ಬಿಸಿ ಸುದ್ದಿ

ಬೀದಿ ಬದಿ ವ್ಯಾಪಾರಸ್ಥರಿಗೆ ಮೂಲಭೂತ ಸೌಕರ್ಯ ಒದಗಿಸಲು ಮೇಯರ್‍ ಗೆ ಮನವಿ

ಕಲಬುರಗಿ : ನಗರದ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈಗಾಗಲೇ ಪಾಲಿಕೆಯಿಂದ ನೀಡಿರುವ ಹಳೆ ಜೈಲ್ ಸೂಪರ 2008/24 ಮಾರ್ಕೆಟದಲ್ಲಿ ವ್ಯಾಪಾರ ಮಳಿಗೆ, ವಲಯ-1 ಗುರುತಿಸಲ್ಪಟ್ಟಿದ್ದು ಸದರಿ ಸ್ಥಳದಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳು ಹತ್ತಿರದಲ್ಲಿದ್ದು ಸದರಿ ಸ್ಥಳದಲ್ಲಿ ಎಲ್ಲಾ ವ್ಯಾಪಾರಸ್ಥರಿಗೆ ವ್ಯಾಪಾರ ಮಾಡಲು ಅನುಕೂಲಗಳನ್ನು ಮಾಡಿಕೊಡಬೇಕೆಂದು ಅಖಿಲ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಜಗನ್ನಾಥ ಸೂರ್ಯವಂಶಿ ಅವರು ಮೇಯರ್ ಯಲ್ಲಪ ನಾಯ್ಕೋಡಿ ಅವರಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಹಳೆ ಜೇಲ್ ಚೌಪಾಟಿ ಸೂಪರ ಮಾರ್ಕೆಟ್ ಜಾಗದಲ್ಲಿ ಬೀದಿ ಬದಿಯಲ್ಲಿ ಕುಳಿತುಕೊಂಡು ಸರಾಫ್ ಬಜಾರ, ಕಿರಾಣಾ ಬಜಾರ, ಚಪ್ಪಲ ಬಜಾರ, ಕಪಡಾ ಬಜಾರ, ಜನತಾ ಬಜಾರ, ದತ್ತ ಮಂದಿರ, ಸಿಟಿ ಬಸ್ ನಿಲ್ದಾಣ ಸೇರಿದಂತೆ ನಗರದಾದ್ಯಂತ ರಸ್ತೆ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ 2014 ಮತ್ತು 2019 ರ ಕಾಯ್ದೆಯನ್ವಯ 2017ರಲ್ಲಿ ಅಂದಿನ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಪಿ.ಸುನೀಲ ಕುಮಾರ ರವರು ಮತ್ತು ಅಧಿಕಾರಿ ವರ್ಗದವರು ಹಳೆ ಜೇಲ್ ಚೌಪಾಟಿ ಸ್ಥಳವನ್ನು ಪರಿಶೀಲಿಸಿ ಈ ಸ್ಥಳದಲ್ಲಿ ಬೀದಿ ಬದಿಯಲ್ಲಿ ಕುಳಿತುಕೊಂಡು ಸೂಪರ ಮಾರ್ಕೆಟ್ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರನ್ನು ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೌಕರ್ಯಗಳನ್ನು ಒದಗಿಸಬೇಕೆಂದು ನಗರಾಭಿವೃದ್ಧಿ ಸಚಿವರು ಪಾಲಿಕೆಯ ಆಯುಕ್ತರಾದ ಪಿ.ಸುನೀಲ ಕುಮಾರ ರವರಿಗೆ ನಿರ್ದೇಶನ ನಿಡಿದ್ದರು.

ಆದರೆ 2017 ರಿಂದ ಇಲ್ಲಿಯವರೆಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳು ಕೂಡ ಒದಗಿಸಿಲ್ಲ.ಪಾಲಿಕೆಯ ವಲಯ-1, 2 ಮತ್ತು 3 ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಐ.ಟಿ.ಐ. ಕಾಲೇಜು ಎದುರುಗಡೆ, ಎಂ.ಎಸ್.ಕೆ.ಮಿಲ್ ರಸ್ತೆ ಕಲಬುರಗಿ, ಡಂಕಾ ವೃತ್ತದಿಂದ ಪಾಕಿಜಾ ವೈನ್ ಶಾಪ್ ವರೆಗೆ, ಕೆ.ಎಂ.ಎಫ್. ಡೈರಿ ಎದುರುಗಡೆ, ಅಣಕಲ್ ಪೆಟ್ರೋಲ್ ಬಂಕ್ ಎದುರುಗಡೆ, ಅಂಡರಬ್ರಿಜ್ ಪಂಚಶೀಲ ನಗರ, ಆಳಂದ ಚೆಕ್‍ಪೆÇಸ್ಟ, ಸೂಪರ ಮಾರ್ಕೆಟ್, ಕಲಬುರಗಿ ಈ ಏಳು ಪ್ರದೇಶಗಳಲ್ಲಿ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರನ್ನು ಈ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವ್ಯಾಪಾರ ಮಾಡಲು ವ್ಯವಸ್ಥೆಗಳನ್ನು ಮಾಡಿಕೊಡುತ್ತೇವೆ ಎಂದು 2015 ರಲ್ಲಿ ಅಂದಿನ ಮಹಾನಗರ ಪಾಲಿಕೆಯ ಆಯುಕ್ತ ಎಸ್.ಬಿ.ಕಟ್ಟಿಮನಿಯವರು ಈಗಾಗಲೇ ನಿರ್ದೇಶನವನ್ನು ನೀಡಿದ್ದರು.

ಆದರೆ, ಇಲ್ಲಿಯವರೆಗೆ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರನ್ನು ಏಳು ಪ್ರದೇಶಗಳಲ್ಲಿ ಸ್ಥಳ ನಿಗದಿ ಮಾಡಿರುವುದಿಲ್ಲ, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಯಾವುದೇ ಸೌಲಭ್ಯಗಳು ನೀಡದೇ ಕಲಬುರಗಿ ನಗರದಲ್ಲಿ ಜನರು ಓಡಾಡಲು, ನಡೆದಾಡಲು, ಈ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಂದ ವಾಹನ ಸವಾರರಿಗೆ ಮತ್ತು ಜನಸಾಮಾನ್ಯರಿಗೆ ತುಂಬಾ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ದಸರಾ, ದೀಪಾವಳಿ, ಗಣೇಶ ಚತುರ್ಥಿ, ರಮ್ಜಾನ್ ಈ ಧಾರ್ಮಿಕ ಹಬ್ಬಗಳಲ್ಲಿ ಸಾರ್ವಜನಿಕರು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಅಥವಾ ಇನ್ನಿತರ ವಸ್ತುಗಳ ಖರೀದಿಗೆ ಆಗಮಿಸಿದ ಸಂದರ್ಭಗಳಲ್ಲಿ ಮೊಬೈಲ್ ಕಳ್ಳತನ, ಕಳ್ಳತನ, ಧರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ತಾವುಗಳು ಹಾಗೂ ಪೆÇಲೀಸ ಆಯುಕ್ತರು, ಸಂಚಾರಿ ಪೆÇಲೀಸರು ಈಗಾಗಲೇ ತಮ್ಮ ಇಲಾಖೆಯಿಂದ ಗುರುತಿಸಿರುವ ಏಳೂ ಸ್ಥಳಗಳಲ್ಲಿ ವ್ಯಾಪಾರ ಮಾಡಲು ಅನುಕೂಲಗಳನ್ನು, ವ್ಯವಸ್ಥೆಗಳನ್ನು ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹೋರಾಟಗಾರ ಮಂಜುನಾಥ ನಾಲವಾರಕರ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago