ಕಲಬುರಗಿ; ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವರು ಕಲಬುರಗಿ ಜಿಲ್ಲೆಯ ನಾಗಾವಿ, ಸನ್ನತಿ, ಕಾಳಗಿ, ಮಲಖೇಡ್, ಶಹಬಾದ್, ಫಿರೋಜಾಬಾದ್ ಹಂಪಾಪುರ, ಕನಗನಹಳ್ಳಿ ಐತಿಹಾಸಿಕ ಸ್ಮಾರಕಗಳನ್ನು ಹೊಂದಿವೆ. ಈ ಸ್ಮಾರಕಗಳನ್ನು ಮರಳಿ ಹಿಂದಿನ ರೂಪಕ್ಕೆ ತರುವದರೊಂದಿಗೆ ಮುಂದಿನ ಪೀಳಿಗೆಗಾಗಿ ಈ ಸ್ಥಳಗಳನ್ನು ಸಂರಕ್ಷಿಸಲಾಗುತ್ತಿದೆ ಹಾಗೂ ಇತಿಹಾಸದ ಬಗ್ಗೆ ಕುತೂಹಲ ಇರುವವರಿಗೆ ಇಲ್ಲಿನ ಐತಿಹಾಸಿಕ ಮಹತ್ವವನ್ನು ದಾಖಲೆ ಮಾಡಲಾಗುವುದು ಹಾಗೂ ಪ್ರವಾಸೋದ್ಯಮ ದೃಷ್ಟಿಯಿಂದ ರಸ್ತೆ, ನೀರು, ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಕಾಳಗಿಯಲ್ಲಿನ ನರಸಿಂಗಸ್ವಾಮಿ, ಸೂರ್ಯನಾರಾಯಣಸ್ವಾಮಿ ಹಾಗೂ ಕಾಳೇಶ್ವರ ದೇಗುಲಗಳು ಐತಿಹಾಸಿಕ ಮಹತ್ವವನ್ನು ಹೊಂದಿದ್ದು, ಸಾವಿರಾರು ಮಂದಿ ಈ ದೇಗುಲಗಳಿಗೆ ಭೇಟಿ ನೀಡುತ್ತಾರೆ, ಈ ಸ್ಥಳಗಳನ್ನು ರಕ್ಷಣೆ ಮಾಡಿ, ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.
ಹೊಳಕುಂಡದ ಬಳಿ 28 ಎಕರೆ ವ್ಯಾಪ್ತಿಯಲ್ಲಿರುವ ಗುಮ್ಮಟಗಳನ್ನು ಸಂರಕ್ಷಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೂಡಾ ಅವರು ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…