ಕಲಬುರಗಿ: ಸ್ನಾತಕೋತ್ತರ ಪದವಿ ಪಡೆದ ಅರ್ಹ ಪ್ರೌಢ ಶಾಲಾ ಶಿಕ್ಷಕರಿಗೆ ಉಪನ್ಯಾಸಕರಾಗಿ ಬಡ್ತಿ ನೀಡಿ ಆದೇಶ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿಯವರು ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದು ತಿಳಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಕಾಲಕಾಲಕ್ಕೆ ಸರಿಯಾದ ಸಮಯದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಪ್ರೌಢಶಾಲೆಯ ಅರ್ಹ ಸ್ನಾತಕೋತ್ತರ ಪದವಿ ಪಡೆದ ಶಿಕ್ಷಕರಿಗೆ ಶೇಕಡ 50ರಷ್ಟು ನ್ನು ಬಡ್ತಿ ಮೂಲಕ ಹುದ್ದೆಗಳನ್ನು ತುಂಬಲಾಗುತ್ತಿತ್ತು. ಆದರೆ ಕಳೆದ 2011 ರಿಂದ ಸುಮಾರು 13 ವರ್ಷಗಳಿಂದ ಇಲಾಖೆಯಲ್ಲಿ ಬಡ್ತಿ ಪ್ರಕ್ರಿಯೆ ಸ್ಥಗಿತಗೊಂಡಿರುತ್ತದೆ. ಅರ್ಹ ಪ್ರೌಢಶಾಲಾ ಶಿಕ್ಷಕರು ಮುಖ್ಯೋಪಾಧ್ಯಾಯ ಹುದ್ದೆಯ ಬಡ್ತಿ ನಿರಾಕರಿಸಿ ಉಪನ್ಯಾಸಕರಾಗಲು ಬಯಸುತ್ತಿದ್ದಾರ ಕಳೆದ 13 ವರ್ಷಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಬಡ್ತಿ ನೀಡುವ ಖಾಲಿ ಹುದ್ದೆಗಳು ಪ್ರತಿ ವರ್ಷ ಹೆಚ್ಚಾಗುತ್ತಾ ಹೋಗುತ್ತಿದೆ ಇದರಿಂದ ಪದವಿಪೂರ್ವ ಹಂತದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೂ ತೊಂದರೆಯಾಗುತ್ತಿದೆ.
ಆದ್ದರಿಂದ ತಕ್ಷಣ ಭಡ್ತಿ ಪ್ರಕ್ರಿಯೆಯನ್ನು ಪ್ರಾರಂಭಿಸುವುದರ ಮೂಲಕ ನಿರೀಕ್ಷೆಯಲ್ಲಿರುವ ಸಹಸ್ರಾರು ಶಿಕ್ಷಕರಿಗೆ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಬಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸುವುದರ ಮೂಲಕ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ಅವಕಾಶವನ್ನು ಕಲ್ಪಿಸಲು ಉಪನಿರ್ದೇಶಕರ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಕೋರಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…