ಕಲಬುರಗಿ: ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕಲಬುರಗಿಯಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ ಪ್ಲೇಸ್‍ಮಂಟ್ ಸೆಲ್, ಸಾಂಸ್ಕøತಿಕ ಸಮಿತಿ ಸಂಯೋಜನೆಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಸಂಶೋಧನಾ ವಿಧಾನ, ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರವನ್ನು ಕಲಬುರಗಿ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಯಲ್ಲಪ್ಪ ನಾಯ್ಕೋಡಿ ಯವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿ, ಭಾರತ ದೇಶಕ್ಕೆ ಯುವಕರ ಕೊಡುಗೆ ಅಗತ್ಯವಾಗಿದೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುಲಬರ್ಗಾ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರಾದ ಡಾ.ರಮೇಶ ರಾಠೋಡ, ಅವರು ವಿದ್ಯಾರ್ಥಿಗಳಿಗೆ ಭಾಷೆಯ ಬಗ್ಗೆ ಗೌರವ ಇರಬೇಕೆಂದರು. ಕನ್ನಡ ಭಾಷೆಯು ಪ್ರಾಚೀನವಾದದು, ಇದರಿಂದ ಭಾಷೆಯ ಅವಲೋಕನವನ್ನು ತಿಳಿದುಕೊಳ್ಳಬೇಕೆಂದರು, ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಬುರಗಿಯ ಪ್ರಾದೇಶಿಕ ಕಛೇರಿಯ ಜಂಟಿ-ನಿರ್ದೇಶಕರಾದ, ಪ್ರೊ.ಶಿವಶರಣ.ಬಿ.ಗೊಳ್ಳೆ ಯವರು ವಿದ್ಯಾರ್ಥಿಗಳಿಗೆ ಸಂಶೋಧನ ವಿಧಾನ ಮತ್ತು ವ್ಯಕ್ತಿತ್ವ ವಿಕಸನ ಮತ್ತು ಸಂವಹನದ ಕುರಿತು ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದರು..
ಕಾಲೇಜಿನ ಪ್ರಾಂಶುಪಾಲರಾದ, ಡಾ.ಸವಿತಾ ತಿವಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಗೌರವ ಅಥಿತಿಗಳಾಗಿ, ಡಾ.ವಿಜಯಕುಮಾರ ಸಾಲಿಮನಿ, ಡಾ.ರಾಜಕುಮಾರ ಸಲಗರ, ಡಾ.ಟಿ.ವಿ. ಅಡಿವೇಶ, ಡಾ.ಮಲ್ಲೇಶಪ್ಪ ಕುಂಬಾರ, ಡಾ.ಬಲಭೀಮ ಸಾಂಗ್ಲಿ, ಡಾ.ಶಾರದಾದೇವಿ ಜಾಧವ, ಡಾ.ವಿಜಯಲಕ್ಷ್ಮಿ ಬಿರಾದಾರ, ಡಾ.ರೋಲೆಕರ್ ನಾರಾಯಣ ಡಾ.ವಿಜಯಲಕ್ಷ್ಮಿ ಪಾಟೀಲ, ಡಾ.ಪ್ರಶಾಂತಕುಮಾರ, ಡಾ.ರಾಜಶೇಖರ ಮಡಿವಾಳ, ಡಾ.ಮಹಾಂತೇಶ ಸ್ವಾಮಿ, ಡಾ.ಅರುಣಕುಮಾರ ಸಲಗರ, ಡಾ.ರಾಬಿಯಾ ಇಫ್ಫತ್, ಡಾ.ಸುರೇಶ ಮಾಳೆಗಾಂವ, ಡಾ.ರಾಮಕೃಷ್ಣ, ಡಾ.ದೌಲಪ್ಪ, ಡಾ.ಚಿವುಕುಲ ಶ್ರೀಕಾಂತ, ಡಾ.ಚಂದ್ರಕಾಂತ ಜಮಾದಾರ, ಡಾ.ಶಿವಲಿಂಗಪ್ಪ ಪಾಟೀಲ, ಡಾ.ರೆಹಮಾನ ಮಹ್ಮದ ಸಾಬ, ಡಾ.ನಾಗಪ್ಪ ಗೋಗಿ, ಡಾ.ಶಾಮಲಾ ಸ್ವಾಮಿ, ಉಪಸ್ಥಿತರಿದ್ದರು. ಇದಲ್ಲದೇ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ಡಾ.ಚಾಂದಬಾಷ್ ಎಂ, ಡಾ.ಗಣಪತಿ ಬಿ. ಸಿನ್ನೂರ, ಡಾ.ಪದ್ಮಾವತಿ ಧನ್ನಿಯವರು ವಿಷಯ ಮಂಡಿಸಿದರು.
ವಿದ್ಯಾರ್ಥಿನಿ ಶುಭ ಪ್ರಾರ್ಥಿಸಿದರು, ಡಾ.ರಾಜಕುಮಾರ ಸಲಗರ ಸ್ವಾಗತಿಸಿದರು, ಡಾ.ಮಲ್ಲೇಸಪ್ಪಾ ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು, ಡಾ.ಬಲಭೀಮ ಸಾಂಗ್ಲಿ ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ/ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಹಾಗೂ ಎಲ್ಲಾ ಸಮಿತಿಯ ಸಂಚಾಲಕರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…