ಸುರಪುರ: ಶಾಲೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ತಾಲೂಕಿನ ಆಲ್ದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಈಶ್ವರಪ್ಪ ಬಡಿಗೇರನನ್ನು ಅಮಾನತು ಮಾಡಲಾಗಿದೆ.
ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಮಂಜುನಾಥ ಅವರು ಆದೇಶ ಹೊರಡಿಸಿ,ಈಶ್ವರಪ್ಪ ಬಡಿಗೇರ ಇವರು ಶಾಲೆಯಲ್ಲಿ ಮಕ್ಕಳೊಂದಿಗೆ ಅನುಚಿತವಾಗಿ ನಡೆದುಕೊಳ್ಳುವುದು,ಅಶ್ಲೀಲ ಪದಗಳಿಂದ ನಿಂದನೆ ಮಾಡುವುದು ಹಾಗೂ ಶಾಲೆಯಲ್ಲಿಯೂ ಅಸಭ್ಯ ವರ್ತನೆ ತೋರುತ್ತಿದ್ದಾರೆ ಎಂದು ಎಸ್.ಡಿಸ.ಎಮ್.ಸಿ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಪ್ರಧಾನಗುರುಗಳು ಮತ್ತು ಅನೇಕ ಜನ ಪೋಷಕರು ದೂರು ನೀಡಿದ್ದರಿಂದ ಬುಧವಾರ ಶಾಲೆಗೆ ಕ್ಷೇತ್ರಶಿಕ್ಷಣಾಧಿಕಾರಿಗಳು ಭೇಟಿ ನೀಡಿದಾಗ ಮಕ್ಕಳು ಶಿಕ್ಷನ ವರ್ತನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು.ಅಲ್ಲದೆ ಪೋಷಕರು ಕೂಡ ಆರೋಪ ಮಾಡಿದ್ದರು.
ಇದರ ಆಧಾರ ಮೇಲೆ ಕ್ಷೇತ್ರಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಅವರು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ವರದಿ ಸಲ್ಲಿಸಿದ್ದರ ಆಧಾರದ ಮೇಲೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…