ಕಲಬುರಗಿ: ಪ್ರವಾದಿ ಮೊಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮ್ ಅವರ ಕುರಿತು ಅವಹೇಳ ಮಾಡಿರುವ ರಾಮಗಿರಿ ಮಹಾರಜ್ ರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ರಜಾ ಅಕಡಮಿಯ ಕಲಬುರಗಿ ಘಟಕ ಶುಕ್ರವಾರ ರೋಜಾ ಪೊಲೀಸ್ ಠಾಣೆಗೆ ದೂರು ನೀಡಿ ಒತ್ತಾಯಿಸಿದೆ.
ಮಹಾರಾಷ್ಟ್ರದ ನಾಸೀಕ್ ನ ತಾಲ್ಲೂಕಿನ ಸಿನ್ನರ್ ತಾಲ್ಲೂಕಿನಲ್ಲಿ ಶ್ರೀ ಕಸ್ತರಾ ಪಂಚಲೆದಲ್ಲಿ ಅಖಂಡ ಹರಿನಾಮ್ ಸಪ್ತಹ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮ್ ಅವರ ಕುರಿತು ಅವಹೇಳವಾಗಿ ಮಾತನಾಡಿದ್ದು, ಇದರಿಂದ ಸಮಸ್ತ ಮುಸ್ಲಿಂ ಸಮಾಜ ಮತ್ತು ಪ್ರವಾದಿ ಮೊಹಮ್ಮದ್ ಅವರ ಅನುಯಾಯಿಗಳಿಗೆ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.
ತಕ್ಷಣ ರಾಮಗಿರಿ ಮಹಾರಜ್ ವಿರುದ್ಧ ಕೋಮುಭಾವನೆ ಕೆರಳಿಸಿರುವುದು ಮತ್ತು ಸಮಾಜದಲ್ಲಿ ಶಾಂತಿ ಭಂಗ ಉಂಟು ತರುವ ಸೇರಿದಂತೆ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿರುವ ಅವರ ಈ ಭಾಷಣವನ್ನು ತೆಗೆದು ಹಾಕಿ, ಸಮಾಜಿಕ ಜಾಲಾತಾಣದಲ್ಲಿ ವಿಡಿಯೋ ಹರಿಬಿಟ್ಟವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸಂಘಟನೆಯ ಸದಸ್ಯರು ದೂರು ನೀಡಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ರಜಾ ಅಕಡಮಿಯ ಅಧ್ಯಕ್ಷರಾದ ಮೊಹಮ್ಮದ್ ರಯಿಸ್ ಬೆಲೈಫ್, ಮೊಹಮ್ಮದ್ ಖಯಾಮ್ ಅಲಿ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…