ಕಲಬುರಗಿ: ಭಾರತೀಯ ಯುವ ಸೈನ್ಯ ಸಂಘಟನೆಯ ನೇತೃತ್ವದಲ್ಲಿ ನಗರದ ಮಹಾನಗರ ಪಾಲಿಕೆ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಶೌಚಾಲಯ ನಿರ್ಮಾಣಕ್ಕೆ ಒತ್ತಾಯಿಸಿದರು.
ನಗರದ ವಾರ್ಡ್ ನಂಬರ್ 23ರ ಬಂಬೂ ಬಜಾರ ಬಸ್ ನಿಲ್ದಾಣದ ಬಳಿ ಸೂಕ್ತ ಶೌಚಾಲಯ ವ್ಯವಸ್ಥೆ ಇಲ್ಲದ ಕಾರಣ ಗ್ರಾಮೀಣ ಭಾಗದಿಂದ ಆಗಮಿಸುವ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಹೀಗಾಗಿ ಪಾಲಿಕೆ ಅಧಿಕಾರಿಗಳು ಮುತುವರ್ಜಿ ವಹಿಸಿ, ಶೌಚಾಲಯ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರಿಗೆ ಆಗಿತ್ತಿರುವ ಸಮಸ್ಯೆಯನ್ನು ತಪ್ಪಿಸಬೇಕು ಹಾಗೂ ಸ್ವಚ್ಚತೆಯ ಕುರಿತು ಗಮನ ಹರಿಸಬೇಕು ಎಂದು ಭಾರತೀಯ ಯುವ ಸೈನ್ಯದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಚಿಂಚನಸೂರ್ ನೇತೃತ್ವದಲ್ಲಿ ಪಾಲಿಕೆ ಉಪ ಆಯುಕ್ತ ಆರ್‍ಪಿ ಜಾಧವ ಅವರಿಗೆ ಮನವಿ ನೀಡಿ ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ರಪೀಕ್ ಪಟೇಲ್ ಸೇರಿದಂತೆ ಇತರರು ಭಾಗವಹಿಸಿದ್ದರು.