ಸುರಪುರ: ನಗರದ ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿನ ಸಹ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿ, ಶಿಕ್ಷಕ ಶಾಲೆಯಲ್ಲಿ ಕರ್ತವ್ಯದಲ್ಲಿದ್ದಾಗ ನಿದ್ದೆ ಮಾತ್ರೆ ಸೇವಿಸುತ್ತಾರೆ.ಅಲ್ಲದೆ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ. ಇವರು ಶಾಲೆಯಲ್ಲಿದ್ದಾಗ ಮೊಬೈಲ್ ಮತ್ತು ಲ್ಯಾಪ್‍ಟಾಪ್ ಮೂಲಕ ಷೇರ್ ಮಾರ್ಕೆಟ್ ವ್ಯವಹಾರವನ್ನು ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.
ಇನ್ನು ಇವರು ಖಾತೆಗಳಿಗಾಗಿ ಬೇರೆ ಬೇರೆ ಮೂಲದಿಂದ ಹಣ ಬರುತ್ತಿದೆ ಎಂದು ಕಳೆದ ಜುಲೈ 4ನೇ ತಾರಿಖು ಶಾಲೆಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆಗಮಿಸಿ ಈತಲು ಕುರಿತು ತನಿಖೆ ಮಾಡಿರುವುದು ಇದೆ.ಅಲ್ಲದೆ ಶಾಲೆಯಲ್ಲಿ ಶಿಕ್ಷಕರೊಂದಿಗೂ ಅನುಚಿತವಾಗಿ ವರ್ತಿಸುತ್ತಾರೆ.ಆದ್ದರಿಂದ ಇಂತಹ ಶಿಕ್ಷಕರಿಂದ ಶಾಲೆಯ ವಾತಾವರಣ ಹಾಳಾಗುತ್ತಿದೆ ಎಂದು ದುರಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವುದರಿಂದ ಮಕ್ಕಳು ಇವರ ಬಳಿಗೆ ಹೋಗಲು ಭಯ ಪಡುವಂತ ಪರಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕೂಡಲೇ ಇಂತಹ ಶಿಕ್ಷಕ ನನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿ ಇವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು,ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಬಿಇಓ ಕಚೇರಿ ಹಾಗೂ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.