ಬೆಂಗಳೂರು: ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟಿಲ್ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು
ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ್ ಮಾಹಿತಿ ನೀಡಿದರು.
“ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಮಂಕಿಫಾಕ್ಸ ಬಗ್ಗೆ ಬಹಳಷ್ಟು ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ನಮ ರಾಜ್ಯದಲ್ಲಿ ಮಂಕಿಫಾಕ್ಸ ಒಂದು ಪ್ರಕರಣವೂ ಕಂಡು ಬಂದಿಲ್ಲ. ಇದರಿಂದ ರಾಜ್ಯದ ಜನರು ಆತಂಕಕ್ಕೆ ಒಳಗಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಟೆಸ್ಟ್ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದು ಸಚಿವರು ಹೇಳಿದರು.
ಇದು ವೈರಲ್ ಇನ್ಫೆಕ್ಷನ್ ಆಗಿರಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೇ ಒಂದು ಕೇಸ್ ಪತ್ತೆಯಾಗಿಲ್ಲದಿದ್ದರೂ ಏಕಾಏಕಿ ಕಂಡುಬಂದರೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ತಿಳಿಸಿದರು.
ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡುವ ಬಗ್ಗೆ ಆರೋಗ್ಯಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ ಎಂದು ಸಚಿವರು ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…