ಸೆ. 23ಕ್ಕೆ ಕಲಬುರಗಿಯಲ್ಲಿ ಮುಖ್ಯಮಂತ್ರಿಗಳ ಜನಸ್ಪಂದನಾ ಸಭೆ: ಬಾಕಿ ಕಡತ ತ್ವರಿತ ವಿಲೇವಾರಿಗೆ ಡಿ.ಸಿ. ಸೂಚನೆ

0
58

ಕಲಬುರಗಿ; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆಪ್ಟೆಂಬರ್ 23 ರಂದು ಕಲಬುರಗಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವ “ಜನಸ್ಪಂದನಾ” ಸಭೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಬಾಕಿ ಇರುವ ಕಡತಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಂತೆ ತಮ್ಮ ಕಚೇರಿಯ ಅಧೀನ ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯ ತರನ್ನುಮ್ ಖಡಕ್ ಸೂಚನೆ ನೀಡಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಅಧಿಕಾರಿ-ಸಿಬ್ಬಂದಿಗಳ ಸಭೆ ನಡೆಸಿದ ಅವರು ಮುಖ್ಯಮಂತ್ರಿಗಳ ಜನಸ್ಪಂದನಾ ಸಭೆ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು ಕಾರ್ಯಕ್ರಮ ಯಶಸ್ಸಿಗೆ ಕಚೇರಿಯ ಎಲ್ಲಾ ಅಧಿಕಾರಿ-ಸಿಬ್ಬಂದಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ. ಯಾವುದೇ ಲೋಪವಿಲ್ಲದೆ ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಬೇಕೆಂದರು.

Contact Your\'s Advertisement; 9902492681

ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡಲಾಗುವ ವಿವಿಧ ಸೇವೆಗಳನ್ನು ಕಾಲಮಿತಿಯಲ್ಲಿ ನೀಡುವಂತೆ ಸೂಚಿಸಿದ ಅವರು ಸಾರ್ವಜನಿಕರು ಅನಗತ್ಯ ಕಚೇರಿಗೆ ಓಡಾಡುವುದನ್ನು ತಪ್ಪಿಸಬೇಕು. ಸಾರ್ವಜನಿಕರ ಕುಂದುಕೊರತೆ ಅರ್ಜಿಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಬೇಕೆಂದ ಅವರು, ಲೋಕಾಯುಕ್ತ ಸಂಸ್ಥೆಯಿಂದ ಬರುವ ಪತ್ರಗಳಿಗೆ ಪ್ರಥಮಾದ್ಯತೆ ಮೇಲೆ ಈ ಕಚೇರಿಯಿಂದ ವರದಿ ನೀಡಬೇಕೆಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಚುನಾವಣಾ ತಹಶೀಲ್ದಾರ ಪಂಪಯ್ಯ, ಸಾಮಾಜಿಕ ಪಿಂಚಣಿ ವಿಭಾಗದ ಸಹಾಯಕ ನಿರ್ದೇಶಕ ಶಿವಶರಣಪ್ಪ ಧನ್ನಿ ಸೇರಿದಂತೆ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here