27ಕ್ಕೆ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಗೆ ಪರೀಕ್ಷೆ: ಪರೀಕ್ಷೆ ಸುಸೂತ್ರವಾಗಿ ನಡೆಸುವಂತೆ ಡಿ.ಸಿ. ಸೂಚನೆ

0
26

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಗೆ ಇದೇ ಆಗಸ್ಟ್ 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ನೀಡದೆ ಜಿಲ್ಲೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಗುರುವಾರ ತಮ್ಮ ಕಚೇರಿ‌ ಸಭಾಂಗಣದಲ್ಲಿ ಪರೀಕ್ಷೆ ಹಿನ್ನೆಲೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ ಅವರು, ಕಲಬುರಗಿ ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು,‌ 220 ವಿಕಲಚೇತನರು ಒಳಗೊಂಡಂತೆ 11 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

Contact Your\'s Advertisement; 9902492681

ಪರೀಕ್ಷೆ ಸುಗಮವಾಗಿ ನಡೆಯುವ ದೃಷ್ಠಿಯಿಂದ 11 ಜನ ರೂಟ್ ಅಧಿಕಾರಿ, 35 ಜನ‌ ಸ್ಥಳೀಯ ಪರಿವೀಕ್ಷಣಾಧಿಕಾರಿ ಹಾಗೂ ಪ್ರತಿ ನಾಲ್ಕು ಕೇಂದ್ರಕ್ಕೆ ಓರ್ವ ಗ್ರೂಪ್ ‘ಎ’ ದರ್ಜೆಯ ಜಿಲ್ಲಾ ಮಟ್ಟದ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದರು.

ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ಪರೀಕ್ಷೆ: ಪರೀಕ್ಷೆಯು ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಪ್ರವೇಶ ಪತ್ರದಲ್ಲಿ ತಿಳಿಸಿರುವಂತೆ ಡ್ರೆಸ್ ಕೋಡ್ ನಿಯಮ ಅಭ್ಯರ್ಥಿಗಳು ಪಾಲಿಸಬೇಕು. ಪ್ರತಿ ಕೇಂದ್ರಕ್ಕೆ ಫ್ರಿಸ್ಕಿಂಗ್ ಮಾಡಲು ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ಒದಗಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಎಲೆಕ್ಟ್ರಾನಿಕ್ ಉಪಕರಣ ಬಳಸಿ ನಕಲು‌ ಮಾಡುವುದಕ್ಕೆ ಕಡಿವಾಣ ಹಾಕಲು ಈ ಬಾರಿ ಪೊಲೀಸರ ಜೊತೆಗೆ ಇ.ಎನ್.ಟಿ. ತಜ್ಞ ವೈದ್ಯರು ಸಹ ಫ್ರಿಸ್ಕಿಂಗ್ ಮಾಡಲಿದ್ದಾರೆ ಎಂದು ಡಿ.ಸಿ. ತಿಳಿಸಿದರು.

ಮೊಬೈಲ್,ಎಲೆಕ್ಟ್ರಾನಿಕ್ ಗ್ಯಾಜೆಟ್ಸ್ ನಿಷೇಧ: ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಮೊಬೈಲ್, ಎಲೆಕ್ಟ್ರಾನಿಕ್ ವಾಚ್, ಕ್ಯಾಲ್ಕುಲೇಟರ್, ಪೇಜರ್ ಸೇರಿದಂತೆ ಎಲ್ಲಾ ಬಗೆಯ ಎಲೆಕ್ಟ್ರಾನಿಕ್ ಗ್ಯಾಜೆಟ್ಸ್ ಗಳನ್ನು ತೆಹೆದುಕೊಂಡು ಹೋಗುವುದು ನಿಷೇಧಿಸಲಾಗಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಡಿ.ಸಿ.ಪಿ (ಕ್ರೈಂ ಮತ್ತು ಸಂಚಾರ) ಪ್ರವೀಣ ನಾಯಕ್, ಸಹಾಯಕ ಆಯುಕ್ತೆ ರೂಪಿಂದರ್‌ ಸಿಂಗ್ ಕೌರ್, ಡಿ.ಡಿ.ಪಿ‌.ಐ ಸೂರ್ಯಕಾಂತ ಮದಾನೆ ಸೇರಿದಂತೆ ವೀಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here