ಕಲಬುರಗಿ: 11ಕ್ಕೂ ಹೆಚ್ಚು ಜನ ಕಾರ್ಮಿಕರು ಮತ್ತು ಪರಸಿ ತುಂಬಿದ ಲಾರಿಯೊಂದು ಉರುಳಿಬಿದ್ದು ಹಲವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚಿಂಚೋಳಿ ತಾಲ್ಲೂಕಿನ ಮಿರಿಯಾಣಾ ಬಳಿ ನಡೆದಿದೆ.
ಕೃಷ್ಣಪೂರ್ ಗ್ರಾಮದಿಂದ ತೆಲಂಗಾಣಕ್ಕೆ ಹೊರಟ ಪರ್ಶಿ ತುಂಬಿದ ಲಾರಿಯಲ್ಲಿ ಗಣಿ ಕಾರ್ಮಿಕರಿದ್ದರು. ಮಿರಿಯಾಣ ಗ್ರಾಮದ ಹತ್ತಿರ ಲಾರಿ ಉರುಳಿಬಿದ್ದ ಪರಿಣಾಮ ಸುಮಾರು 4 ಜನ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ತಮ್ಮ ಸಿಬ್ಬಂದಿಗಳೊಂದಿಗೆ ಧಾವಿಸಿದ ಮಿರಿಯಾಣಾ ಠಾಣಾಧಿಕಾರಿ ಮಡಿವಾಳಪ್ಪ ಬಾಗೋಡಿ ಅವರು, ತಕ್ಷಣ ಆಸ್ಪತ್ರೆಗೆ ದೂರವಾಣಿ ಮೂಲಕ ಸಂಪರ್ಕಿಸಿ ಮುಖ್ಯ ವೈದ್ಯಾಧಿಕಾರಿಗಳಿಗೆ ವಿಷಯ ತಿಳಿಸಿದರು. ಗಾಯಾಳುಗಳನ್ನು ಮೂರಕ್ಕಿಂತ ಹೆಚ್ಚು ಅಂಬುಲೆನ್ಸ್‍ಗಳಲ್ಲಿ ಅಸ್ಪತ್ರೆಗೆ ದಾಖಲಿಸಲಾಯಿತು.
ಗಾಯಾಳುಗಳನ್ನು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಂತೋಷ್ ಪಾಟೀಲ್ ಹಾಗೂ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ತುರ್ತು ಚಿಕಿತ್ಸೆ ನೀಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಸರ್ಕಾರಿ ಆಸ್ಪತ್ರೆಯ ಟ್ರಾಮ್ ಸೆಂಟರ್‍ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಸಿಪಿಐ ಎಲ್.ಎಚ್. ಗೌಂಡಿ ಅವರ ಸೂಚನೆಯಂತೆ ಪಿಎಸ್‍ಐ ಮಡಿವಾಳಪ್ಪ ಬಾಗೋಡಿ ಅವರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…