ಬಿಸಿ ಬಿಸಿ ಸುದ್ದಿ

ಬುಡಕಟ್ಟು ಜನರು ಮೂಲ ಜಾನಪದ ಕಲಾವಿದರು

ಕಲಬುರಗಿ ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ಕಲಬುರಗಿ ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಜಾಫರಬಾದ ವತಿಯಿಂದ “ವಿಶ್ವ ಬುಡಕಟ್ಟು ದಿನಾಚರಣೆ” ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಸುನಿಲಕುಮಾರ ವಂಟಿ ಅವರು ಡೋಲು ಬಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬುಡಕಟ್ಟು ಜನರು ಮೂಲ ಜಾನಪದ ಕಲಾವಿದರು.

ಬುಡಕಟ್ಟು, ಅಲೆಮಾರಿಗಳು ತಮ್ಮಲ್ಲಿರುವ ಮೂಲ ಜಾನಪದ ಕಲೆಯನ್ನು ಪ್ರದರ್ಶನ ಮಾಡಿ ಭಿಕ್ಷಾಟನೆ ಮಾಡಿ ಜೀವನ ಸಾಗಿಸುವವರು. ಇವರು ವೃತ್ತಿ ಕಲಾವಿದರು, ಬದುಕು ಸಾಗಿಸಲು ಇವರಿಗೆ ಕಲಾ ವೃತ್ತಿಯೇ ಆಸರೆ. ಈಗಿನ ಡಿಜಿಟಲ್ ಯುಗದಲ್ಲಿ ಇವರ ಕಲೆಗೆ ಬೆಲೆ ಇಲ್ಲದೆ ಇವರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ಇವರ ಬದುಕಿಗೆ ಆಸರೆಯಾಗಿ ಸರಕಾರ ಇವರತ್ತ ಗಮನಹರಿಸಿ ಇವರ ಕಲೆಗೆ ತಕ್ಕ ಬೆಲೆಕೊಟ್ಟು ಇವರ ಬದುಕಿಗೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಸರಕಾರಕ್ಕೆ ಮನವಿ ಮಾಡಿದರು. ಇವರಿಗೆ ಸಹಕಾರ ನೀಡದಿದ್ದರೆ, ಮೂಲ ಜಾನಪದ ಕಲಾವಿದರನ್ನು
ಕಳೆದುಕೊಂಡಂತಾಗುತ್ತದೆ ಎಂದು ನುಡಿದರು.

ಶಾಲೆಯ ಮುಖ್ಯ ಗುರುಗಳಾದ ಶ್ರೀ ಬಸಯ್ಯ ಅವರು ಮಾತನಾಡುತ್ತ ಜಾನಪದ ಕಲಾ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಇದೆ. ಪೂರ್ವಜರ ಜನಪದ ಹಾಡುಗಳನ್ನು ಹಾಡುವ ಮೂಲಕ ತಮ್ಮ ದೈನಂದಿನ ಬದುಕಿನಲ್ಲಿ ಖುಷಿಯನ್ನು ಕಾಣುತ್ತಿದ್ದಾರೆ ಎಂದು ಹೇಳುವ ಮೂಲಕ ಅನೇಕ ಜಾನಪದ ಹಾಡುಗಳನ್ನು ಹಾಡುತ್ತಾ ಮಕ್ಕಳಿಗೆ ಕಲಿಯುವಂತೆ ಪ್ರೇರೇಪಿಸಿದರು.

ಮುಖ್ಯ ಅತಿಥಿಗಳಾಗಿ ಬಸವರಾಜ ಹೆಳವರ ಯಾಳಗಿ, ದೇವಿಂದ್ರಪ್ಪ ಗಣಮುಖಿ, ಬಸಯ್ಯಸ್ವಾಮಿ ಹೊದಲೂರ ಮಾತನಾಡಿದರು. ಶಶಿಕಲಾ ಚೌವ್ಹಾಣ, ಸರಿತಾ ಇವರು ಜಾನಪದ ಹಾಡು ಹಾಡುವ ಮೂಲಕ ಜನಮನ ಸೆಳೆದರು.

ಪರಿಷತ್ತಿನ ಅಧ್ಯಕ್ಷರಾದ ಎಂ.ಬಿ.ನಿಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಹಶಿಕ್ಷಕ ಸಿದ್ದು ಯಾನಗುತ್ತ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸುನಂದಾ, ಶಿವಲೀಲಾ, ಆಶಾ ಕುಲಕರ್ಣಿ, ಸುಧಾ,ಗಂಗುಬಾಯಿ, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಲಾವಿದರಿಗೆ ಸನ್ಮಾನ ಹಾಗೂ ಕಲಾವಿದರಿಂದ ಕಲಾ ಪ್ರದರ್ಶನ ಜರುಗಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago