ರಾಯಚೂರು: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ವಿದ್ಯುತ್ ಬೇಡಿಕೆ ತಗ್ಗಿದೆ. ಈ ಹಿನ್ನೆಲೆ ವಿದ್ಯುತ್ ಉತ್ಪಾದನೆ ಪ್ರಮಾಣವೂ ಸಹ ಇಳಿಕೆಯಾಗಿದೆ.
ಜಿಲ್ಲೆಯಲ್ಲಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿರುವ 8 ಘಟಕಗಳ ಪೈಕಿ 5 ಘಟಕಗಳ ಉತ್ಪಾದನಾ ಕಾರ್ಯ ಸ್ಥಗಿತಗೊಂಡಿದೆ. ಸದ್ಯ, 1,720 ಮೆಗಾ ವ್ಯಾಟ್ ಸಾಮರ್ಥ್ಯದ ಕೇಂದ್ರದಿಂದ ಕೇವಲ 399 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.
ನಮ್ಮ ರಾಜ್ಯಕ್ಕೆ ಒಟ್ಟು 6,504 ಮೆಗಾ ವ್ಯಾಟ್ನಷ್ಟು ವಿದ್ಯುತ್ ಬೇಡಿಕೆಯಿದೆ. ಜಲ ವಿದ್ಯುತ್ ಸ್ಥಾವರಗಳಿಂದಲೇ ಹೆಚ್ಚು ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ರಾಜ್ಯದ ವಿದ್ಯುತ್ ಬಳಕೆಗೆ ಎಲ್ಲಾ ಮೂಲಗಳಿಂದ ಒಟ್ಟು 6,503 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ.