ಬಿಸಿ ಬಿಸಿ ಸುದ್ದಿ

ವಿವಿಧ ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ನೂತನ ಪೂಲಿಸ್ ಆಯುಕ್ತರಿಗೆ ಮನವಿ

ಕಲಬುರಗಿ; ನಗರದಲ್ಲಿ ನಗರ ವ್ಯಾಪ್ತಿಯಲ್ಲಿ ಕೊಲೆ, ಸುಲಿಗೆ, ದರೋಡೆಗಳನ್ನು ನಿಯಂತ್ರಣ ಮಾಡಬೇಕು, ಮಹಿಳೆಯರ ಸುರಕ್ಷತೆಗೆಕ್ರಮ ಕೈಗೊಳ್ಳಬೇಕು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿಜಾರಿಗೆತರುವಂತೆ ಕಲ್ಯಾಣ ನಾಡು ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಸ್.ನಡಗೇರಿ ನೇತೃತ್ವದಲ್ಲಿ ನೂತನ ಪೋಲಿಸ್ ಆಯುಕ್ತರಾದ ಅಧಿಕಾರ ವಹಿಸಿಕೋಂಡ ಎಸ್.ಡಿ.ಶರಣಪ್ಪ ಅವರಿಗೆ ಸನ್ಮಾನಿಸಿ ಮನವಿ ಪತ್ರ ಸಲ್ಲಿಸಿದರು.

ನಗರಲ್ಲಿ ವ್ಯಾಪ್ತಿಯಲ್ಲಿ ಕೊಲೆ, ಸುಲಿಗೆ, ದರೋಡೆಗಳನ್ನು ನಿಯಂತ್ರಣ ಮಾಡಬೇಕು.ಮಹಿಳೆಯರ ಸುರಕ್ಷತೆಗೆಕ್ರಮ ಕೈಗೊಳ್ಳಬೇಕು ಕಲಬುರಗಿ ನಗರದ ರೌಡಿಗಳ ಅಟ್ಟಹಾಸವನ್ನು ನಿಯಂತ್ರಣ ಮಾಡಬೇಕು, ಕಲಬುರಗಿ ನಗರದ ಲಾಡ್ಜಗಳಲ್ಲಿನ ಅನೈತಿಕ ಚಟುವಟಿಕೆಗಳನ್ನು ನಿಯಂತ್ರಣ ಮಾಡಬೇಕು, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆಆದ್ಯತೆ ನೀಡಬೇಕು, ಮಟಕಾ, ಆನ್‍ಲೈನ್ ಬೆಟ್ಟಿಂಗ್, ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹಾಗೂ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಸಾರ್ವಜನಿಕರಜಾಗವನ್ನು ಅತಿಕ್ರಮಣ ಮಾಡುತ್ತಿರುವ ವಿರುದ್ಧ ಪರಿಣಾಮಕಾರಿಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಗರದ ಸಂಚಾರದಟ್ಟಣೆಯ ಸುಗಮ ನಿರ್ವಹಣೆಗೆಕ್ರಮ ಕೈಗೊಳ್ಳಬೇಕು, ನಗರದ ವ್ಯಾಪ್ತಿ ಜನ ಸಂಖ್ಯೆಗೆ ತಕ್ಕಂತೆ ರಾಮಮಂದಿರ, ಹೈಕೊರ್ಟ, ಪಟ್ಟಣ ಮತ್ತು ಕಪನೂರ ಬಡಾವಣೆಗಳಲ್ಲಿ ಹೊಸ ಪೊಲೀಸ್ ಠಾಣೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಸದರಿ ಬೇಡಿಕೆಗಳನ್ನು ತಾವುಗಳು ಈಡೇರಿಸುವ ಮೂಲಕ ಕಲಬುರಗಿ ನಗರದಲ್ಲಿ ಶಾಂತಿ ಸುವ್ಯವಸ್ಥೆಕಾಪಾಡಿ ಕಲಬುರಗಿ ನಗರದ ಜನತೆಗೆ ನೆಮ್ಮದಿಯ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕೆಂದು ಮುತ್ತಣ್ಣ ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜೈಭೀಮ ಮಾಳಗೆ, ಮೋಹನ ಸಾಗರ, ಪ್ರವೀಣ ಖೇಮನ್, ಸೂರ್ಯಪ್ರಕಾಶ ಚಾಳಿ, ಅರುಣ ಇನಾಮದಾರ, ಜೀವನ ಖಿರಸಾಗರ, ರಾಣೇಶ ಸಾವಳಗಿ, ಮಹೇಶ ಮಾನೆ ಸೇರಿದಂತೆ ಇತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago