ಶಹಾಪುರ : ಸಾಹಿತ್ಯ ವಿವಿಧ ಪ್ರಕಾರಗಳಾದ ಕಥೆ, ಕವನ, ಕಾದಂಬರಿ, ಗಜಲ್,ನಾಟಕ ಮುಂತಾದವುಗಳಲ್ಲಿ ಶಾಂತರಸರು ಸಾಕಷ್ಟು ಕೆಲಸ ಮಾಡಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಪುರ ಹೇಳಿದರು.
ನಗರದ ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಡಾ.ಚೆನ್ನಣ್ಣ ವಾಲಿಕಾರ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಕಲಾನಿಕೇತನ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿರುವ ನಾಡಿನ ಹಿರಿಯ ಗಜಲ್ ಗಾರುಡಿಗ ಲೇಖಕ,ದಿ.ಶಾಂತರಸರ ಜನ್ಮ ಶತಮಾನೋತ್ಸವದ ಅಂಗವಾಗಿ ವಿಶೇಷ ಉಪನ್ಯಾಸ ಮತ್ತು ಗಜಲ್ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯ ಸಾಹಿತಿ ಶಾಂತರಸರ ಮೌಲ್ಯಯುತ ಕೃತಿಗಳನ್ನು ಓದಿ ಅರ್ಥೈಸಿಕೊಂಡು ಅವರ ಬದುಕಿನ ಆದರ್ಶ ತತ್ವಗಳು ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅವಡಿಸಿಕೊಂಡು ಉತ್ತಮವಾದ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಯಚೂರಿನ ಖ್ಯಾತ ಕಥೆಗಾರರಾದ ಮಹಾಂತೇಶ್ ನವಲಕಲ್ ಮಾತನಾಡಿ ಗಜಲ್ ಸಾಹಿತ್ಯ ಪುರಾತನದಾಗಿದ್ದು, ಅರೇಬಿಕ್ ಕಾವ್ಯಗಳಿಂದ ಹುಟ್ಟಿಕೊಂಡಿದೆ, ಶಾಂತರಸರ ಗಜಲ್ ನಲ್ಲಿ ಯಥೇಚ್ಛವಾಗಿ,ಆಧ್ಯಾತ್ಮಿಕ,ಪ್ರೀತಿ ಪ್ರೇಮ,ಪ್ರಣಯ,ಹಾಸ್ಯ,ವಿಡಂಬನೆಯ ಜೊತೆಗೆ ಕಾವ್ಯಾತ್ಮಕ ಅಭಿವ್ಯಕ್ತಿಯಾಗಿ ಅದರೊಳಗೆ ಕಾಣಬಹುದು ಎಂದು ನುಡಿದರು.
ನೂತನವಾಗಿ ಕಲಬುರಗಿ ರಂಗಾಯಣದ ನಿರ್ದೇಶಕರಾಗಿ ಆಯ್ಕೆಯಾದ ಡಾ.ಸುಜಾತ ಜಂಗಮಶೆಟ್ಟಿ ಮಾತನಾಡಿ ಶಾಂತರಸರ ಬದುಕಿನ ವಾಸ್ತವ ಸ್ಥಿತಿಗತಿಗಳನ್ನ,ಬರಹದ ವೈಚಾರಿಕತೆಯ ನೆಲೆಗಟ್ಟುನ್ನ, ಸರ್ಕಾರದ ತಪ್ಪುಗಳನ್ನು ಕಠೋರವಾಗಿ ಟೀಕಿಸುವ ಹಾಗೂ ಹೋರಾಟದ ಪರಿಕಲ್ಪನೆ ಕುರಿತು ಸವಿಸ್ತಾರವಾಗಿ ಮಾತನಾಡಿ,ಸೌಮ್ಯ ಸ್ವಭಾವದ ಶಾಂತರಸರ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ನಾಡಿನಾದ್ಯಂತ ಶಾಂತರಸರ ಗಜಲ್ ಸಾಹಿತ್ಯದ ಕುರಿತು ಮತ್ತಷ್ಟು ಬೆಳಕು ಚೆಲ್ಲುವ ನಿಟ್ಟಿನಲ್ಲಿ ಹೆಚ್ಚೆಚ್ಚು ಕಾರ್ಯಕ್ರಮಗಳು ಆಯೋಜಿಸಿ, ಸಾಹಿತ್ಯಸಕ್ತರಿಗೆ ತಿಳಿಪಡಿಸುವ ಉದ್ದೇಶದೊಂದಿಗೆ ನಾವು ನೀವೆಲ್ಲರೂ ಜೊತೆಗೂಡಿ ಮಾಡಬೇಕಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಹಿರಿಯ ಸಾಹಿತಿ ಸಿದ್ದರಾಮ ಹೊನಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಮಾರಂಭದ ವೇದಿಕೆಯ ಮೇಲೆ, ಬಸವಪ್ರಭು ಹೆಂಬಿರಾಳ, ತಾಲೂಕು ಕಸಾಪ ಅಧ್ಯಕ್ಷ ಡಾ.ರವೀಂದ್ರನಾಥ್ ಹೊಸಮನಿ,ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಯ್ಯಣ್ಣ ಇನಾಮದಾರ್,ಶಿವಲೀಲಾ, ಎಂ. ಎಸ್.ಸಜ್ಜನ್ ಹನ್ನಮ್ಮ,ಶಿವಶರಣಪ್ಪ ಭಂಡಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಡಿ ಜೋನ್ ನೃತ್ಯ ಅಕಾಡೆಮಿಯ ಕಲಾವಿದರಿಂದ ನೃತ್ಯ, ಹಾಗೂ ಮಾತೃ ಛಾಯಾ ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನಗೊಂಡಿತು, ಟ್ರಸ್ಟ್ ಅಧ್ಯಕ್ಷ ಬಸವರಾಜ ಶಿಣ್ಣೂರ ಪ್ರಾಸ್ತಾವಿಕ ನುಡಿಗಳನ್ನಾಡಿದರು,ಮಹಮ್ಮದ್ ಮಶಾಕ್ ನಿರೂಪಿಸಿದರು,ಗಿರೀಶ್ ಸಜ್ಜನ್ ಶೆಟ್ಟಿ ಸ್ವಾಗತಿಸಿದರು, ಹನುಮಂತರಾಯಗೌಡ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…