ಬಿಸಿ ಬಿಸಿ ಸುದ್ದಿ

ಕಲಬುರಗಿ ಪಾಲಿಕೆ ವ್ಯಾಪ್ತಿಯಲ್ಲಿ ಎತ್ತರದ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಮಹಾನಗರ ದಿನೇ ದಿನೇ ಬೆಳೆಯುತ್ತಿದ್ದು ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳಲ್ಲಿ‌ ಗಣನೀಯ ಅಭಿವೃದ್ದಿ ಹೊಂದುತ್ತಿದೆ. ಹಾಗಾಗಿ, ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಾವು ಶ್ರಮವಹಿಸಿದ್ದು ಅಕ್ಕಪಕ್ಕದ ಮಹಾನಗರಗಳಂತೆ ಕಲಬುರಗಿ ಮಹಾನಗರ ಕೂಡಾ ಅಭಿವೃದ್ದಿ ಹೊಂದಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿ ನಗರದ ಸಮಗ್ರ ಅಭಿವೃದ್ದಿಗೆ ತಾವು ಹಾಗೂ ತಮ್ಮ ಸರ್ಕಾರ ಕಟಿಬದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ನೀಲಿ ನಕ್ಷೆ ತಯಾರಿಸಲಾಗುತ್ತಿದೆ. ಸಾರ್ವಜನಿಕರ‌ ಹಿತದೃಷ್ಠಿ ಹಾಗೂ ಆರ್ಥಿಕ ಅಭಿವೃದ್ದಿಯನ್ನು ಪರಿಗಣಿಸಿ ಅಧಿಕಾರಿಗಳೊಂದಿಗೆ ಹಾಗೂ ಸಾರ್ವಜನಿಕ ವಲಯದ ವಿವಿಧ ಸಂಘ ಸಂಸ್ಥೆ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳೊಂದಿಗೆ ಚರ್ಚೆ ನಡೆಸಿ ಕಲಬುರಗಿ ನಗರವನ್ನು ವಾಣಿಜ್ಯ ನಗರವನ್ನಾಗಿ ಅಭಿವೃದ್ದಿ‌ಪಡಿಸಲು ತಾವು ಅವಿರತ ಪರಿಶ್ರಮಿಸುತ್ತಿರುವುದಾಗಿ ಸಚಿವರು ಹೇಳಿದ್ದಾರೆ.

ನಗರದ‌ ಜನಸಾಂದ್ರತೆ ಹೆಚ್ಚಾಗುತ್ತಿದ್ದು ನಿವೇಶನಗಳ ದರ ಏರಿಕೆಯಾಗಿದೆ. ಮಧ್ಯಮ ವರ್ಗದ ಜನರ ಅನುಕೂಲತೆ ಹಾಗೂ ಆರ್ಥಿಕ ಅಭಿವೃದ್ದಿಗಾಗಿ ಬಹುಮಹಡಿ ಕಟ್ಟಡಗಳಿಗೆ ಪ್ರೋತ್ಸಾಹಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರದಲ್ಲಿ ಹೆಚ್ಚು ಹೆಚ್ಚು ಬಹುಮಹಡಿ ಕಟ್ಟಡಗಳು ನಿರ್ಮಾಣಗೊಂಡರೆ ಸಾರ್ವಜನಿಕರಿಗೆ ಅನುಕೂಲವಾಗುವುದರ ಜೊತೆಗೆ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಸಾರ್ವಜನಿಕರ ಹಿತದೃಷ್ಠಿ ಹಾಗೂ ಆರ್ಥಿಕ‌ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡಗಳ ಎತ್ತರವನ್ನು 11.5 ಮೀಟರ್ ಗಳಿಂದ 15 ಮೀಟರ್ ಗಳವರೆಗೆ ಏರಿಸುವ ಉದ್ದೇಶದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆ ಯ ಕಲಂ 13 ( ಇ) ಅಡಿಯಲ್ಲಿ ವಲಯ ನಿಯಮಾವಳಿಗೆ ತಿದ್ದುಪಡಿ ತರಲು ನಗರಾಭಿವೃದ್ದಿ‌ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನಿರ್ದೇಶನ‌ ನೀಡಿದ್ದೆ.

ಈ ಹಿನ್ನೆಲೆಯಲ್ಲಿ ಪ್ರಾಧಿಕಾರ ಸಲ್ಲಿಸಿದ ಪ್ರಸ್ತಾವನೆಗೆ ಸಂಬಂಧಿಸಿದಂತೆ ನಗರಾಭಿವೃದ್ದಿ‌ ಇಲಾಖೆ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಅಗತ್ಯ ಸಲಹೆ ಹಾಗೂ ಸೂಚನೆ ನೀಡಿದ್ದೆ. ಪರಿಣಾಮವಾಗಿ, ನಗರಾಭಿವೃದ್ದಿ ಇಲಾಖೆ ನಿಯಮಾವಳಿಗೆ ಅಗತ್ಯ ತಿದ್ದುಪಡಿ ತರಲು ಕರಡು ಅಧಿಸೂಚನೆಯನ್ನು ಅಗಸ್ಟ್ 26 ರಂದು ಹೊರಡಿಸಿದ್ದು, ಮೂವತ್ತು (30) ದಿನಗಳ ಒಳಗಾಗಿ ಏನಾದರೂ ಆಕ್ಷೇಪಣೆ ಹಾಗೂ ಸಲಹೆಗಳಿದ್ದರೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಕೋರಿದೆ ಎಂದು ಸಚಿವರು ಹೇಳಿದ್ದಾರೆ.

ಬೆಳವಣಿಗೆಗೆ ಇದ್ದ ಅಡ್ಡಿ ದೂರ: ಈ ಮೊದಲು ಅಗ್ನಿಶಾಮಕ ಕಾಯ್ದೆ ಅಡಿಯಲ್ಲಿ ನೆಲ ಮತ್ತು ನಾಲ್ಕು ಮಹಡಿಗಳ ಅಥವಾ 15 ಮೀಟರ್ ಗಳ ಎತ್ತರದ ಕಟ್ಟಡಗಳನ್ನು ಬಹುಮಹಡಿ ಕಟ್ಟಡಗಳೆಂದು ಪರಿಗಣಿಸಲಾಗುತಿತ್ತು ಹಾಗೂ ಅಂತಹ ಕಟ್ಟಡಗಳು ಅಗ್ನಿಶಾಮಕ ಇಲಾಖೆಯಿಂದ ನಿರಪೇಕ್ಷಣೆ ಪತ್ರ ತರಬೇಕಾಗಿತ್ತು. ಆದರೂ ಪ್ರಾಧಿಕಾರಕ್ಕೆ ಸರ್ಕಾರದಿಂದ ಅನುಮೋದನೆಗೊಂಡ ನಿಯಮಾವಳಿಯಲ್ಲಿ ಕಟ್ಟಡದ ಎತ್ತರವನ್ನು 11.5 ಮೀಟರ್ ಗಳಿಗೆ ನಿಗದಿಗೊಳಿಸಿದ್ದರಿಂದ ಕಲಬುರಗಿ ನಗರದ ಬೆಳವಣಿಗೆಗೆ ಅಡ್ಡಿಯುಂಟಾಗಿತ್ತು.

ಹಾಗಾಗಿ, ನಗರದ ಬೆಳವಣಿಗೆಗೆ ಇರುವ ಅಡ್ಡಿ ಆತಂಕಗಳನ್ನು ದೂರಮಾಡಲು ನಿಯಮಾವಳಿಗೆ ತಿದ್ದಪಡಿ ತರುವುದು ಅಗತ್ಯ ಹಾಗೂ ಅವಶ್ಯಕ ಎಂದು ಅಧಿಕಾರಿಗಳಿಗೆ ನಿರ್ದೇಶನ‌‌ ನೀಡಿದ್ದೆ ಎಂದು ಪ್ರಿಯಾಂಕ್ ಖರ್ಗೆ ನೆನಪಿಸಿಕೊಂಡಿದ್ದಾರೆ.

ಬಹುಮಹಡಿ‌ ಕಟ್ಟಡಗಳ ಅನುಕೂಲತೆ: ಕಟ್ಟಡಗಳ ಎತ್ತರ ವಿಸ್ತರಿಸಿದರೆ ಬಹುಮಹಡಿ ಕಟ್ಟಡಗಳು ಹೆಚ್ಚು ಹೆಚ್ಚು ನಿರ್ಮಾಣಗೊಳ್ಳಲಿವೆ. ಇದರಿಂದ ಸಾರ್ವಜನಿಕ‌ ಸಾರಿಗೆ, ಆರ್ಥಿಕ ಅಭಿವೃದ್ದಿ ಹಾಗೂ ಸೀಮಿತ ಸ್ಥಳದ ಬಳಕೆಯೊಂದಿಗೆ ಒಂದೇ ಕಟ್ಟಡದಲ್ಲಿ ಹೆಚ್ಚಿನ‌ ವ್ಯವಹಾರಗಳಿಗೆ ಅನುಕೂಲವಾಗಲಿದೆ. ಇದರಿಂದಾಗಿ ಕಲಬುರಗಿ ನಗರ ಭವಿಷ್ಯದಲ್ಲಿ ಗಮನಾರ್ಹ ಅಭಿವೃದ್ದಿ ಹೊಂದಿದ ನಗರವಾಗಲಿದೆ‌ ಎಂದು ಸಚಿವರು ಒತ್ತಿ ಹೇಳಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago