ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ ರದ್ದೇವಾಡ್ಗಿ ಮತ್ತು ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರ ಮಾಡಬುಳ ಇವರ ಸಹಭಾಗಿತ್ವದಲ್ಲಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಲ್ಕೂಡ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿಯಲ್ಲಿ ರೈತರ ಹೊಲದಲ್ಲಿ ಉದ್ದು ಬೆಳೆಯಲ್ಲಿ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಶ್ರೀಮತಿ ಸುರೇಖಾ ಅಂಕಲಗಿ ಮಾತನಾಡಿ ಬಿತ್ತನೆ ಬೀಜ ವಿತರಣೆ ಮಾಡಿ, ಸುಧಾರಿತ ಬೇಸಾಯ ಕ್ರಮಗಳು, ಸಮಗ್ರ ಪೀಡೆ ಮತ್ತು ಪೋಷಕಾಂಶಗಳ ನಿರ್ವಹಣೆಯಿಂದ ಹೆಚ್ಚಿನ ಇಳುವರಿಯನ್ನು ಪಡೆದ ರೈತರಿಂದ ಇನ್ನುಳಿದ ರೈತರಿಗೆ ಸಮಗ್ರ ಮಾಹಿತಿ ಕೊಡಮಾಡಲಾಯಿತು.
ಸಾಮಾನ್ಯವಾಗಿ ಈ ಭಾಗದಲ್ಲಿ ಎಕರೆಗೆ 2 ರಿಂದ 3 ಕ್ವಿಂಟಾಲ್ ಬರುತ್ತಿದ್ದು ರೈತರಾದ ಶ್ರೀ.ಶಿವಕುಮಾರ ದತ್ತೂರಗಿ ಅವರು 3 ಎಕರೆ 19 ಗುಂಟೆಯಲ್ಲಿ 18-20 ಕ್ವಿಂಟಾಲ್ ಉದ್ದು ಬೆಳೆಯನ್ನು ಪಡೆದು ಇನ್ನುಳಿದ ರೈತರಿಗೆ ಮಾದರಿಯಾಗಿರುತ್ತಾರೆ. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ಮಲ್ಲಪ್ಪ (ಬೇಸಾಯಶಾಸ್ತ್ರ ವಿಜ್ಞಾನಿ)ರವರು ಮಾತನಾಡಿ ಸಮಗ್ರ ಬೇಸಾಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ರೈತರು ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು.
ಕಾರ್ಯಕ್ರಮದಲಿ ್ಲಗ್ರಾಮದ ರೈತರು. ಬಿಟಿಎಮ್ ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…