ಹೈದರಾಬಾದ್ ಕರ್ನಾಟಕ

ಡೀಮ್ಡ್ ಅರಣ್ಯ ಪ್ರದೇಶ ಸರ್ವೇಗೆ ಡಿ.ಸಿ. ಸೂಚನೆ

ಕಲಬುರಗಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ಡೀಮ್ಡ್ ಅರಣ್ಯ ಪ್ರದೇಶವನ್ನು ಕಂದಾಯ, ಅರಣ್ಯ, ಭೂದಾಖಲೆಗಳ ಇಲಾಖೆಯು ಜಂಟಿಯಾಗಿ ಸರ್ವೇ ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಮಂಗಳವಾರ ಈ ಸಂಬಂಧ ತಮ್ಮ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರರು, ಡಿ.ಡಿ.ಎ.ಆರ್., ಎ.ಡಿ.ಎಲ್.ಆರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು 3-4 ತಿಂಗಳ ಒಳಗಾಗಿ ವಾಸ್ತವ ವರದಿ ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕಾಯ್ದಿಟ್ಟ ಅರಣ್ಯ ಪ್ರದೇಶ ಘೋಷಣೆಗೆ ಪೂರಕವಾಗಿ ಕರ್ನಾಟಕ ಅರಣ್ಯ ಕಾಯ್ದೆ-1963 ಸೆಕ್ಷನ್ 4ರ ಪ್ರಕಾರ ಜಿಲ್ಲೆಯಲ್ಲಿ 25 ಅರಣ್ಯ ಪ್ರದೇಶಗಳನ್ನು ಅಧಿಸೂಚಿಸಿದ್ದು, ಇದರಲ್ಲಿ ಪ್ರಗತಿಯಲ್ಲಿರುವ 8 ಪ್ರದೇಶಗಳ ಕುರಿತು ಕೂಡಲೆ ಕಂದಾಯ ಉಪ ವಿಭಾಗದ ಸಹಾಯಕ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದಲ್ಲಿ ಸೆಕ್ಷನ್-17ರಂತೆ ಕಾಯ್ದಿಟ್ಟ ಅರಣ್ಯ ಪ್ರದೇಶ ಘೋಷಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಇನ್ನು ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಸಂರಕ್ಷಣೆ ನಿಟ್ಟಿನಲ್ಲಿ ಕೆಲವು ಗ್ರಾಮಗಳಲ್ಲಿ ಪಹಣಿ, ಮೊಟೇಷನ್‌ನಲ್ಲಿ ಮಾಲೀಕತ್ವದ ಬಗ್ಗೆ ತಕರಾರು ಇದ್ದು, ಇದನ್ನು ತಹಶೀಲ್ದಾರರು, ಆರ್.ಎಫ್.ಓ.ಗಳು ಸರಿಪಡಿಸಬೇಕೆಂದು ಡಿ.ಸಿ. ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಸಹಾಯಕ ಆಯುಕ್ತೆ ರೂಪಿಂದರ್ ಸಿಂಗ್ ಕೌರ್, ಪ್ರಭುರೆಡ್ಡಿ, ತಾಲೂಕಿನ ತಹಶೀಲ್ದಾರರು,. ಎ.ಡಿ.ಎಲ್.ಆರ್. ಭಾಗಿಯಾಗಿದ್ದರು.

emedialine

Recent Posts

ಎಂ.ಎಸ್ ಇರಾಣಿ ವಿದ್ಯಾರ್ಥಿಗೆ ದ್ವೀತಿಯ ಸ್ಥಾನ

ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…

5 hours ago

ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…

5 hours ago

ಸ್ಲಂ ಜನಾಂದೋಲನ ಜಿಲ್ಲಾ ಘಟಕದಿಂದ ಹಕ್ಕು ಪತ್ರ ನೊಂದಣಿ ಖಾತ ಪ್ರತಿ ವಿತರಣೆ

ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ  ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ  ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…

5 hours ago

ಸಂವಿಧಾನ ದಿನಾಚರಣೆ

ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…

5 hours ago

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪೆÇೀಲೀಸ್ ಇಲಾಖೆಗೆ ಅಭಿನಂದನೆ

ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…

5 hours ago

ಲೋಕೋಪಯೋಗಿ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆಯಿಂದ ಧರಣಿ ಸತ್ಯಾಗ್ರಹ

ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ  ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…

5 hours ago