ಬಿಸಿ ಬಿಸಿ ಸುದ್ದಿ

ವಿಶ್ವ ಮಟ್ಟದ ವೃತ್ತಿಪರ ಕೌಶಲ್ಯಗಳ ಸ್ಪರ್ಧಗೆ ರಾಜ್ಯದ 9 ವಿದ್ಯಾರ್ಥಿಗಳು: ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಫ್ರಾನ್ಸ್ ನ ಲಿಯೋನ್‌ನಲ್ಲಿ ನಡೆಯಲಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕೌಶಲಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿ (ಕೆ.ಎಸ್.ಡಿ.ಸಿ) ರಾಜ್ಯದ 9 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ. *ಫ್ರಾನ್ಸ್ ತೆರಳುವ ಮುನ್ನ ಭೇಟಿಯಾದ ವಿದ್ಯಾರ್ಥಿಗಳಿಗೆ ವೈದ್ಯ ಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಬುಧವಾರ ಶುಭಕೋರಿದರು.

2024 ಸೆಪ್ಟೆಂಬರ್ 10 ರಿಂದ 15ರವರೆಗೆ ಫ್ರಾನ್ಸ್ ನ ಲಿಯೋನ್ ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ವೃತ್ತಿಪರ ಕೌಶಲಗಳ “ಒಲಂಪಿಕ್ಸ್” ಎಂದೇ ಬಣ್ಣಿಸಲಾಗುತ್ತದೆ. 1 ವಿಭಿನ್ನ ಕೌಶಲ್ಯ ಸ್ಪರ್ಧೆಗಳು ನಡೆಯುವ ವಿಶ್ವದ ಅತಿ ದೊಡ್ದ ಕಾರ್ಯಕ್ರಮವಾಗಿದೆ. 22 ವರ್ಷದ ಒಳಗಿನ ಸುಮಾರು 1000 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು, ತಮ್ಮ ವೃತ್ತಿಪರ ಕೌಶಲ್ಯ ಪ್ರದರ್ಶಿಸಲಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿಯು ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಆಶ್ರಯದಲ್ಲಿ ಕರ್ನಾಟಕದ ಕೌಶಲಪೂರ್ಣ ಅಭ್ಯರ್ಥಿಗಳಿಗೆ ತಮ್ಮ ಕೌಶಲಗಳನ್ನು ರಾಷ್ಟ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಿ ಬಹುಮಾನಗಳನ್ನು ಗೆಲ್ಲುವ ಅವಕಾಶಗಳನ್ನು ಕಲ್ಪಿಸಿದೆ.

“ವಿದ್ಯಾರ್ಥಿಗಳ ತಂಡಕ್ಕೆ ಶುಭಾಶಯಗಳನ್ನು ಕೋರಿದ ಸಚಿವ ಡಾ. ಶರಣ ಪ್ರಕಾಶ್ ಪಾಟೀಲರು ಈ ಅವಕಾಶವನ್ನು ಬಳಸಿಕೊಂಡು ನಿಮ್ಮ ಕೌಶಲ್ಯಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸಿ ಪ್ರಶಸ್ತಿಗಳನ್ನು ಪಡೆದು ರಾಜ್ಯ ಹಾಗೂ ದೇಶಕ್ಕೆ ಹೆಸರು ತನ್ನಿ,” ಎಂದು ಹುರುದುಂಬಿಸಿದರು. ರಾಜ್ಯದ 9 ವಿದ್ಯಾರ್ಥಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ಐಟಿಐ, ಡಿಪ್ಲೊಮೋ ಹಾಗೂ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಮಾಡುತ್ತಿದ್ದಾರೆ.

ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಮಂಡಳಿ (ಎನ್.ಎಸ್.ಡಿ.ಸಿ) ಯು ಭಾರತ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತರಬೇತಿ ನೀಡಿ ವಿಶ್ವ ಕೌಶಲ್ಯ ಸ್ಪರ್ಧೆಗೆ ತಯಾರಿ ಮಾಡುವ ಸ್ಪರ್ಧೆ ಆಯೋಜಿಸುತ್ತಾ ಬಂದಿದೆ. ನವದೆಹಲಿಯಲ್ಲಿ 2024 ಮೇ 15 ರಿಂದ 19 ರ ವರೆಗೆ ಆಯೋಜಿಸಿದ್ದ ರಾಷ್ಟಮಟ್ಟದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ ಎರಡನೆಯ ಸ್ಥಾನ ಪಡೆದಿತ್ತು.

ಕೆಎಸ್‌ಡಿಸಿ ಅಧ್ಯಕ್ಷೆ ಕಾಂತಾ ನಾಯಕ್, ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ವಿ ರಾಮಣಾ ರೆಡ್ಡಿ, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕರು ಎಂ ಕನಗವಳ್ಳಿ, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕರು ವೈಕೆ ದಿನೇಶ್ ಕುಮಾರ್, ಎನ್‌ಎಸ್‌ಡಿಸಿ ಸಲಹೆಗಾರ ವೆಣುಗೋಪಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago