ಕಲಬುರಗಿ: ಇದೇ ಸೆಪ್ಟೆಂಬರ್ 14 ರಂದು ಕಲಬುರಗಿ ಜಿಲ್ಲೆಯಾದ್ಯಂತ ನ್ಯಾಶನಲ್ ಲೋಕ ಅದಾಲತ್ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್. ನಾಗಶ್ರೀ ಅವರು ಹೇಳಿದರು.
ಬುಧುವಾರದಂದು ಕಲಬುರಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎ.ಡಿ.ಆರ್ ಕಟ್ಟಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಗೆ ಒಳಪಟ್ಟ ಎಲ್ಲಾ ತಾಲ್ಲೂಕು ನ್ಯಾಯಾಲಗಳಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಇಲ್ಲಿಯವರಿಗೆ 85.000 ಪ್ರಕರಣಗಳು ಇತ್ಯರ್ಥವಾಗಿವೆ ಕಲಬುರಗಿ ಜಿಲ್ಲೆಯಲ್ಲಿ 50.808 ಪ್ರಕರಣಗಳು ಬಾಕಿಯಿವೆ ಈ ಪ್ರಕರಣಗಳನ್ನ ಅತಿ ಶೀಘ್ರವಾಗಿ ಇತ್ಯರ್ಥಪಡಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಅವರು ಹೇಳಿದರು.
ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನ ಇತ್ಯರ್ಥಪಡಿಸಲಾಗುವುದು ಹಣ ಮತ್ತು ಸಮಯ ಉಳಿಸಬಹುದಾಗಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಜಿಲ್ಲೆಗೆ ಒಳಪಟ್ಟ ಎಲ್ಲಾ ತಾಲೂಕು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ ಎಂದು ತಿಳಿಸಿದರು.
ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡವರು ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಹಿಂದಿರುಗಿಸಲಾಗುವುದು ಹಾಗೂ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನ ಇತ್ಯರ್ಥಪಡಿಸುವುದರಿಂದ ಹಣ ಮತ್ತು ಸಮಯ ವ್ಯರ್ಥವಾಗುವುದನ್ನ ಉಳಿಸಬಹುದಾಗಿದೆ ಎಂದು ಹೇಳಿದರು.
ಜನತಾ ನ್ಯಾಯಾಲಯದಲ್ಲಿ ಎಲ್ಲ ರೀತಿಯ ವ್ಯಾಜಪೂರ್ವ ಪ್ರಕರಣಗಳನ್ನು ಪ್ರತಿನಿತ್ಯ ನಡೆಯುತ್ತಿರುವ ಜನತಾ ನ್ಯಾಯಾಲಯದಲ್ಲಿ ಸಂಧಾನ ಮುಖೇನ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಹಾಗೂ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡ ಪ್ರಕರಣಗಳಿಗೆ ಮೇಲ್ಮನವಿಯ ಅವಕಾಶವಿರುವುದಿಲ್ಲ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರÀಕ್ಕೆ ವಕೀಲರ ಮುಖಂತಾರ ಅಥವಾ ಅರ್ಜಿಗಳನ್ನು ಸಲ್ಲಿಸಬಹುದು. ಕಲಬುರಗಿ ಜಿಲ್ಲೆಗೆ ಒಳಪಟ್ಟ ಎಲ್ಲಾ ತಾಲೂಕು ನ್ಯಾಯಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗುವಂತಹ ಪ್ರತಿದಿನ ನಡೆಸುತ್ತಿರುವ ಲೋಕ ಅದಾಲತ್/ಖಾಯಂ ಜನತಾ ನ್ಯಾಯಾಲಯಗಳಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳಬಹುದೆಂದು ಎಂದರು.
ಜಿಲ್ಲೆಯಲ್ಲಿರುವ ಯಾವುದೇ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಅದೇ ರೀತಿ ಖಾಯಂ ಜನತಾ ನ್ಯಾಯಾಲಯ ಕಚೇರಿಯನ್ನು ಸಹ ಸಂಪರ್ಕಿಸಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಶ್ರೀನಿವಾಸ್ ನವಲೆ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…