ಚಿಂಚೋಳಿ: ತಾಲೂಕ ಚಿಂಚೋಳಿಯ ಪ್ರತಿಯೊಂದು ಗ್ರಾಮಗಳಲ್ಲಿರುವ ಮತ್ತು ಪುರಸಭೆ ವ್ಯಾಪ್ತಿಯ ಪ್ರತಿಯೊಂದು ವಾರ್ಡನ ಪರಡಿ ಮಹಿಳೆಯರಿಗೆ, ಆರಾಧಕರಿಗೆ, ಬೂಥೆಯರಿಗೆ, ಮಂಗಳಮುಖಿಯರಿಗೆ, ದೇವದಾಸಿಯರಿಗೆ ವಿವಿಧ ವಸತಿ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮಕ್ಕೆ ಒತ್ತಾಯಿಸಿ ಹೋರಾಟಗಾರ ಮಾರುತಿ ಗಂಜಗಿರಿ ನೇತೃತ್ವದಲ್ಲಿ ಕ್ಷೇತ್ರದ ಶಾಸಕರಿಗೆ ಆಗ್ರಹಿಸಿದರು.
ಈ ಸಮುದಾಯಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹಾಗೂ ಮುಖ್ಯಾಧಿಕಾರಿಗಳ ನಡೆ ಮತ್ತು ಕಂದಾಯ ಇಲಾಖೆಯಿಂದ ವೃದ್ಧಾಪ್ಯ ಪುರುಷ ಮತ್ತು ಪರಡಿ ಮಹಿಳೆಯರಿಗೆ ದೊರೆಯುವ ಸೌಲಭ್ಯಗಳ ವರದಿ ಮಾಡುವಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ನೀರಿಕ್ಷಕರು ಮದ್ಯವರ್ತಿಗಳ ಮಾತು ಕೇಳಿ ಪರಡಿ ಮಹಿಳೆಯರಿಗೆ ತಾರತಮ್ಯ ಮಾಡುತ್ತಿರುವ ತಾಲೂಕಾಡಳಿತಕ್ಕೆ ತಾವುಗಳು ಸೂಕ್ತ ನಿರ್ದೇಶನ ನೀಡುವಂತೆ ಶಾಸಕ ಡಾ. ಅವಿನಾಶ ಜಾಧವ್ ಒತ್ತಾಯಿಸಲಾಯಿತು.
ಈ ಕುರಿತು ಕೂಡಲೆ ಅಧಿಕಾರಿಗಳಿಗೆ ಈ ರೀತಿ ಮಾಡದಂತೆ ತಾಕೀತು ಮಾಡಿ ಪರಡಿ ಮಹಿಳೆಯರಿಗೆ ಬೂಥೆಯರಿಗೆ ಆರಾಧಕರಿಗೆ ಮಂಗಳಮುಖಿಯರಿಗೆ ದೇವದಾಸಿ ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ನೀಡುವಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾರುತಿ ಗಂಜಗಿರಿ ನಿವೃತ್ತ ಮುಖ್ಯ ಗುರುಗಳಾದ ಸಿರಾಜ್ಜೋದ್ದಿನ್ ಪಟೇಲ ಸಾಗರ ಹೊಸಳ್ಳಿ ಮೋಹನ ಐನಾಪುರ ದ್ರೌಪತಿ ಚಿಮ್ಮನಚೋಡ ಮರೆಮ್ಮಾ ಕಲ್ಲಮ್ಮಾ ಪ್ರಭಾವತಿ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…